ಮುದ್ದೇಬಿಹಾಳ: ಪಟ್ಟಣದ ಹಡಲಗೇರಿಯಲ್ಲಿನ ಮಾದರಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆಯನ್ನು ಬುಧವಾರ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು ನಾವುಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕುತ್ತಿದ್ದು ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು. ಸರಕಾರದ ಸವಲತ್ತು ಸೌಲಭ್ಯಗಳ ಸದುಪಯೋಗ ಪಡಿಸಿಕೊಂಡು ಬದುಕು ಸುಂದರವಾಗಿ ಕಟ್ಟಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎಮ್.ಜಿ.ವ್ಹಿ.ಸಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಬಿ.ಎ.ಗೂಳಿ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಬಸವರಾಜ ನಾಡಗೌಡ ಮಾತನಾಡಿ, ವಿದ್ಯಾರ್ಥಿಗಳು ಶ್ರದ್ಧೆ, ಆಸಕ್ತಿ ಏಕಾಗ್ರತೆಯಿಂದ ಶಿಕ್ಷಣ ಪಡೆದು ಮೌಲ್ಯಯುತ ಜೀವನ ರೂಪಿಸಿಕೊಳ್ಳಬೇಕು. ಮೊಬೈಲ್‌ನ್ನು ಗ್ರಂಥಾಲಯದಂತೆ ಬಳಸಿ ಜ್ಞಾನಾರ್ಜನೆಯ ಜೊತೆಗೆ ಕೌಶಲ್ಯ ರೂಪಿಸಿಕೊಂಡು ಪಠ್ಯೇತರ ಚಟುವಟಿಕೆಗಳಾದ ಸಾಂಸ್ಕೃತಿಕ, ಕ್ರೀಡೆ ಹಾಗೂ ಎನ್.ಎಸ್.ಎಸ್. ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ದೈಹಿಕ ಮತ್ತು ಮಾನಸಿಕ ಸದೃಡತೆ ಬೆಳೆಸಿಕೊಂಡು ವ್ಯಕ್ತಿತ್ವ ವಿಕಸನದ ಮೂಲಕ ಉತ್ತಮ ನಾಗರಿಕರಾಗಿ ಬೆಳೆಯಬೇಕು ಎಂದರು.
ಪ್ರಾಚಾರ್ಯ ಡಾ.ಎಸ್.ಎಲ್ ಪಾಟೀಲ ಅಧ್ಯಕ್ಷೀಯ ನುಡಿಗಳನ್ನಾಡಿದರು. ಪ್ರೊ. ಮಂಜುಳಾ ಕಟಗೇರಿಂ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಡಾ. ದಸ್ತಗೀರ ಹಾಲ್ಯಾಳ ಸ್ವಾಗತಿಸಿದರು. ಪ್ರೊ.ಶಿವಕುಮಾರ ಉಣ್ಣಿಬಾವಿ ವಂದಿಸಿದರು. ಪ್ರೊ. ಶ್ರೀಮತಿ.ಪೂಜಾ ಬಡಿಗೇರವರು ನಿರೂಪಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

