ಸಿಂದಗಿ: ಸಾವಿತ್ರಿಬಾಯಿ ಪುಲೆ ಸಾಮಾಜಿಕ ಅಸಮಾನತೆಗಳ ವಿರುದ್ಧ ಹೋರಾಡಿ ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಿದರು ಎಂದು ಎಸ್.ಡಿ.ಎಂ.ಸಿ ಅಧ್ಯಕ್ಷ ಚನ್ನಪ್ಪಗೌಡ ಬಿರಾದಾರ ಹೇಳಿದರು.
ತಾಲೂಕಿನ ಹಂದಿಗನೂರ ಗ್ರಾಮದ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಸಾವಿತ್ರಿಬಾಯಿ ಪುಲೆ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ದೇಶದ ಪ್ರಥಮ ಮಹಿಳಾ ಶಿಕ್ಷಕಿ ಎನಿಸಿಕೊಂಡಿದ್ದಾರೆ. ಮಹಿಳಾ ಶಿಕ್ಷಣಕ್ಕೆ ಅವರ ಕೊಡುಗೆ ಅನನ್ಯ. ಇಂದಿಗೂ ಮಹಿಳೆಯರಿಗೆ ಅವರು ಸ್ಫೂರ್ತಿಯಾಗಿದ್ದರೆ ಎಂದರು.
ಈ ವೇಳೆ ಗ್ರಾಮ ಪಂಚಾಯತ್ ವತಿಯಿಂದ ಶಾಲೆಗೆ ೨೦ ಡೆಸ್ಕ ಗಳನ್ನು ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಆಯ್.ಎಂ.ಬಿರಾದಾರ, ಸಿದ್ದಣ್ಣ ಪಟ್ಟಣಶೆಟ್ಟಿ, ನಾನಾಗೌಡ ಬಿರಾದಾರ, ಭೀಮರಾಯ ಬಿಂಗೋಳ್ಳಿ, ಮಡಿವಾಳಪ್ಪ ಗುಬ್ಬೇವಾಡ, ಶಾಲೆಯ ಮುಖ್ಯಗುರು ಎಸ್.ಎಸ್. ಬುಲಬುಲೆ, ವ್ಹಿ.ಎಸ್.ಕುಲಕರ್ಣಿ, ವಿಜಯಕುಮಾರ ಚಿಂಚೋಳ್ಳಿ, ಶ್ರೀಕಾಂತ ಹಿರೇಮಠ, ಸೋಮಶೇಖರ ಪತ್ತಾರ ಸೇರಿದಂತೆ ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

