ಬಸವನಬಾಗೇವಾಡಿ: ಜಿಲ್ಲಾ ಮಾದಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕವು ೨೦೨೨-೨೩ ನೇ ಸಾಲಿನ ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ವೈದ್ಯಕೀಯ, ಎಜನಿಯರಿಂಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದೆ. ೨೦೨೨-೨೩ ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.೮೦ ರಷ್ಟು, ಪಿಯುಸಿ ಪರೀಕ್ಷೆಯಲ್ಲಿ ಶೇ. ೭೦ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಜ.೫ ರೊಳಗೆ ತಮ್ಮ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಬಸವನಬಾಗೇವಾಡಿ, ಕೊಲ್ಹಾರ ತಾಲೂಕಿನ ಪ್ರತಿಭಾ ಪುರಸ್ಕಾರಕ್ಕೆ ಒಳಪಡುವ ವಿದ್ಯಾರ್ಥಿಗಳು ಸಂಘದ ಅಧ್ಯಕ್ಷ ಕೆ.ಎಂ.ಬೇಲಿ ಮೊ- ೯೦೧೯೪೪೨೨೪೮, ಪಿ.ಎಂ.ರತ್ನಾಕರ ಮೊ-೯೯೦೦೬೭೧೦೮೨, ಸಿ.ಟಿ.ಮಾದರ ಮೊ- ೮೬೧೮೨೬೦೭೯೪, ಎಸ್.ಬಿ.ಮಾದರ ಮೊ- ೯೪೮೧೫೭೧೦೭೮, ಎಚ್.ಎಂ. ಹೊಸಮನಿ ಮೊ- ೮೪೩೧೮೩೭೫೧೬ ಇವರಿಗೆ ಸಂಪರ್ಕಿಸಿ ಮಾಹಿತಿ ನೀಡಬೇಕು. ಜ.೭ ರಂದು ಪಟ್ಟಣದ ಮಸಬಿನಾಳ ರಸ್ತೆಯಲ್ಲಿರುವ ಯಲ್ಲಾಲಿಂಗ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಸಮಾಜದ ಪುರಸಭೆ, ಪಟ್ಟಣ ಪಂಚಾಯತ ಸದಸ್ಯರನ್ನು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರನ್ನು ಹಾಗೂ ಹೊಸದಾಗಿ ಸರ್ಕಾರಿ ನೌಕರಿಗೆ ಸೇರಿದವರನ್ನು, ನಿವೃತ್ತಿ ಹೊಂದಿದ ಸಮಾಜದ ನೌಕರರ ಬಾಂಧವರನ್ನು ಸನ್ಮಾನಿಸಲಾಗುವುದು ಎಂದು ತಾಲೂತು ಮಾದಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಪಾವೆಡಪ್ಪ ದೊಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
