ಮುದ್ದೇಬಿಹಾಳ: ಅಮರಶಿಲ್ಪಿ ಜಕಣಾಚಾರಿ ಅವರು ಶಿಲ್ಪ ಕಲೆಗೆ ನೀಡಿದ ಕೊಡುಗೆ ಅಪಾರವಾದದ್ದು. ಇದು ಸೂರ್ಯ ಚಂದ್ರರು ಇರುವವರೆಗೆ ಅಮರವಾಗಿರುತ್ತದೆ ಎಂದು ತಹಶೀಲ್ದಾರ ಬಲರಾಮ ಕಟ್ಟಿಮನಿ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಅಮರ ಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಅಮರ ಶಿಲ್ಪಿ ಚಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಅಮರ ಶಿಲ್ಪಿ ಜಕಣಾಚಾರಿ ಅವರು ರೂಪಿಸಿದ ಅದ್ಭುತ ಕಲಾಕೃತಿಗಳು ಇಂದಿಗೂ ನಮ್ಮನ್ನು ಬೆರಗುಗೊಳಿಸುತ್ತವೆ. ಇಂತಹ ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಜಗತ್ತಿನ ಅದ್ಭುತ ಶಿಲ್ಪಗಳ ಸಾಲಿನಲ್ಲಿ ನಿಲ್ಲುವ ಜಕಣಾಚಾರಿ ಅವರು ಕಲ್ಲಿನಲ್ಲಿ ಕೆತ್ತಿದ ಬೆಲೂರು ಮತ್ತು ಹಳೆಬೀಡು ಸೇರಿದಂತೆ ಇತರ ಸ್ಥಳಗಳಲ್ಲಿ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ. ಮಾಡುವ ಕೆಸದ ಬಗ್ಗೆ ತಿಳುವಳಿಕೆ, ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆ ಇದ್ದಲ್ಲಿ ಯಶಸ್ಸು ಲಭಿಸುತ್ತದೆ. ನಮ್ಮೊಳಗಿನ ಕಲೆಯನ್ನು ನಾವು ಗುರುತಿಸಿದರೆ ಮಾತ್ರ ಸಮಾಜ ನಮ್ಮನ್ನು ಗುರುತಿಸುತ್ತದೆ. ಸಾಧಕರನ್ನು ಸ್ಮರಣೆ ಮಾಡಿದರಷ್ಟೇ ಸಾಲದು ಅವರ ಗುಣ ಮತ್ತು ಬೆಳೆದು ಬಂದ ಪರಿಶ್ರಮದ ಘಟನೆಗಳನ್ನ ತಿಳಿದು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತೀ ಮುಖ್ಯ ಎಂದರು.
ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕಾಳಿಕಾದೇವಿ ಅರ್ಚಕ ಸುರೇಶ ಆಚಾರ, ತಾಲೂಕಾ ಅಧ್ಯಕ್ಷ ಮಲ್ಲಣ್ಣ ಪತ್ತಾರ(ತಾರನಾಳ), ಸಮಾಜದ ಹಿರಿಯ ಮುಖಂಡ ನಾರಾಯಣ ದೊಟಿಹಾಳ, ತಾಲೂಕಾ ಯುವ ಘಟಕದ ಅಧ್ಯಕ್ಷ ರಮೇಶ ಪತ್ತಾರ(ತಮದಡ್ಡಿ), ಚಂದ್ರಶೇಖರ ಪತ್ತಾರ, ಮೌನೇಶ ಹಂದ್ರಾಳ, ವೀರುಪಾಕ್ಷಿ ಪತ್ತಾರ, ಮಳಿಯಪ್ಪ ಪತ್ತಾರ, ಪ್ರಕಾಶ ಕವಡಿಮಟ್ಟಿ, ಸುರೇಶ ಪತ್ತಾರ, ಕಾಶಿನಾಥ ಹೊಕ್ರಾಣಿ, ಕರ್ಣೇಶ ಪತ್ತಾರ, ಮೌನೇಶ ಇಟಗಿ, ಗೌರಿ ಪತ್ತಾರ, ಪುರಸಭೆ ಸದಸ್ಯೆ ಸಹನಾ ಬಡಿಗೇರ ಜ್ಯೋತಿ ಮಾಯಾಚಾರಿ ಸೇರಿದಂತೆ ಮತ್ತೀತರರು ಇದ್ದರು. ಶಿಕ್ಷಕ ಟಿ.ಡಿ.ಲಮಾಣಿ ನಿರೂಪಿಸಿ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

