ತಿಕೋಟಾ: ಮಕ್ಕಳ ಆರೈಕೆ ಮಾಡುವ ಕೂಸಿನ ಮನೆಗಳು ಬಡವರು, ಕೂಲಿಕಾರರು, ರೈತರ ಮಕ್ಕಳಿಗೆ ಅನುಕೂಲವಾಗಲಿದ್ದು, ಅವುಗಳ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ತಾಲ್ಲೂಕ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ ಹೇಳಿದರು.
ಪಟ್ಟಣದ ತಾಲ್ಲೂಕ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ಕೂಸಿನ ಮನೆ ಆರೈಕೆದಾರರ ಎರಡನೇ ಹಂತದ ತರಬೇತಿ ಉದ್ಘಾಟಿಸಿ ಅವರು ಮಾತನಾಡಿದರು.
ಕೂಸಿನ ಮನೆ ಆರೈಕೆದಾರರು ತರಬೇತಿ ಪಡೆದು ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕು. ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರ ಮೂರು ವರ್ಷದೊಳಗಿನ ಮಕ್ಕಳಿಗೆ ಆರೈಕೆ ಮಾಡುವ ಉದ್ದೇಶದಿಂದ ಕೂಸಿನ ಮನೆ ಎಂಬ ಶೀರ್ಷಿಕೆಯಡಿ ಶಿಶು ಪಾಲನಾ ಕೇಂದ್ರಗಳನ್ನು ಪ್ರಾರಂಭ ಮಾಡಲಾಗಿದೆ.
ಕೂಸಿನ ಮನೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಬರುವಂತೆ ನೋಡಿಕೊಳ್ಳಬೇಕು. ನಿಮ್ಮ ಮೇಲೆ ಸಾಕಷ್ಟು ಜವಾಬ್ದಾರಿ ಇರುತ್ತದೆ. ಮಕ್ಕಳ ಪಾಲಕರಿಗೆ ಪ್ರತಿದಿನ ನೆಮ್ಮದಿಯಿಂದ ಕೆಲಸ ಮಾಡಲು ಸಹಾಯಕವಾಗುತ್ತದೆ. ಗ್ರಾಮೀಣ ಪ್ರದೇಶದ ಬಡವರ ಮಕ್ಕಳಿಗೆ ಕೂಸಿನ ಮನೆ ವರವಾಗಿದೆ. ಅದರಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕ ತಾವುಗಳು ಬಹಳ ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ಮಕ್ಕಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.
Subscribe to Updates
Get the latest creative news from FooBar about art, design and business.
Related Posts
Add A Comment

