ಸಿಂದಗಿ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಜನರ ಜೀವನಕ್ಕೆ ಮತ್ತು ಪರಿಪೂರ್ಣ ಬದುಕಿಗೆ ದಾರಿ ದೀಪವಾಗಿದ್ದರು. ಅವರ ಸಂದೇಶ, ಹಿತ ನುಡಿಗಳು ಎಂದೆಂದಿಗೂ ಜೀವಂತ ಎಂದು ಶಾಲೆಯ ಆಡಳಿತಾಧಿಕಾರಿ ಎಸ್.ಎಸ್. ಪಾಟೀಲ ಹೇಳಿದರು.
ಪಟ್ಟಣದ ಶ್ರೀ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಸ್ಥೆಯ ಮಲ್ಲಿಕಾರ್ಜುನ ಕನ್ನಡ ಮಾಧ್ಯಮ ಮತ್ತು ಪಂಚತಂತ್ರ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಶ್ರೀ ಸಿದ್ದೇಶ್ವರ ಶ್ರೀಗಳ ಗುರು ನಮನ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಕನ್ನಡ ನಾಡು ಸೇರಿದಂತೆ ದೇಶ, ವಿದೇಶಗಳಲ್ಲಿ ಹಲವು ದಶಕಗಳಿಂದ ಪ್ರತಿ ನಿತ್ಯವೂ ಪ್ರವಚನವನ್ನೇ ಉಸಿರಾಗಿಸಿಕೊಂಡಿರುವ ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಅವರ ಬದುಕು ಅತ್ಯಂತ ಸರಳವಾದುದು. ಸಜ್ಜನಿಕೆಯನ್ನು ಮೈಗೂಡಿಸಿಕೊಂಡು ಬಾಳಿ, ಬದುಕಿ, ಸರಳತೆಯನ್ನೇ ಬೋಧಿಸಿದವರು ಎಂದರು.
ಈ ವೇಳೆ ಸಂಸ್ಥೆಯ ಅಧ್ಯಕ್ಷ, ನಿವೃತ್ತ ಪ್ರಾಚಾರ್ಯ ಎನ್.ಜಿ.ಸಜ್ಜನ, ಸುಜಾತ ಪಾಟೀಲ ಸೇರಿದಂತೆ ಶಾಲೆಯ ಮುಖ್ಯಗುರುಗಳು, ಶಿಕ್ಷಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

