ಮುದ್ದೇಬಿಹಾಳ: ಮುಸ್ಲಿಂ ಮಹಿಳೆಯರ ಕುರಿತು ಮಾತನಾಡಿದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ರಾಜ್ಯ ಸರ್ಕಾರವು ಸ್ವಯಂ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸುವುದು ಅಗತ್ಯವಿದೆ ಎಂದು ಕರ್ನಾಟಕ ಮುಸ್ಲಿಂ ಯೂನಿಟ್ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಲಾಡ್ಲೆಮಶಾಕ ನಾಯ್ಕೋಡಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಮಾಜದಲ್ಲಿ ದ್ವೇಷ ಬಿತ್ತುವ ಉದ್ದೇಶದಿಂದ ಕಲ್ಲಡಕ ಪ್ರಭಾಕರ ಭಟ್ ಮುಸ್ಲಿಂ ಮಹಿಳೆಯರ ಕುರಿತು ಹೇಳಿಕೆ ನೀಡಿದ್ದಾರೆ. ಇದು ಕೇವಲ ಆ ಧರ್ಮದ ಮಹಿಳೆಯರಿಗೆ ಮಾತ್ರವಲ್ಲದೇ ಇಡೀ ಮಹಿಳಾ ಸಮಾಜಕ್ಕೆ ಅಪಮಾನವಾದಂತಾಗಿದೆ. ಇವರ ವಿರುದ್ಧ ರಾಜ್ಯ ಸರ್ಕಾರವು ಹಿಂದೇಟು ಹಾಕದೆ ಕಾನೂನು ಕ್ರಮಕ್ಕೆ ಮುಂದಾಗಲಿ ಎಂದು ಒತ್ತಾಯಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

