ವಿಜಯಪುರ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ವಿಜಯಪುರ ವತಿಯಿಂದ ನಗರದ ಬಿಎಲ್‌ಡಿಇ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಿಳಾ ಮಹಾವಿದ್ಯಾಲಯದಲ್ಲಿ ಜನವರಿ ೧೦ರಂದು ಬೆಳಿಗ್ಗೆ ೧೧ ಗಂಟೆಗೆ MY BHARAT-VIKSIT BHARAT@2047 ವಿಷಯದ ಬಗ್ಗೆ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ.
ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ರಾಜ್ಯಮಟ್ಟಕ್ಕೆ ಕಳುಹಿಸಲಾಗುವುದು. ಹಾಗೂ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ಒಂದು ಲಕ್ಷ ರೂ. ಬಹುಮಾನ, ದ್ವೀತಿಯ ಸ್ಥಾನ ಪಡೆದವರಿಗೆ ೫೦ ಸಾವಿರ ರೂ. ತೃತೀಯ ಸ್ಥಾನ (ಎರಡು) ಪಡೆದವರಿಗೆ ತಲಾ ೨೫ ಸಾವಿರ ರೂ. ಬಹುಮಾನ ನೀಡಲಾಗುವುದು.
ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವವರು ದಿನಾಂಕ : ೦೯-೦೧-೨೦೨೪ರೊಳಗಾಗಿ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಅಧಿಕಾರಿಗಳು, ನೆಹರು ಯುವ ಕೇಂದ್ರ, ವಿಜಯಪುರ ಕಚೇರಿ ದೂ: ೦೮೩೫೨-೨೪೪೧೩೦, ಮೊ: ೯೯೭೦೮೨೩೯೩೦ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
