Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»‘ನೈಸ್ ಯೋಜನೆ’ ವಶಕ್ಕೆ ಪಡೆಯಲು ದೇವೇಗೌಡರ ಆಗ್ರಹ
(ರಾಜ್ಯ ) ಜಿಲ್ಲೆ

‘ನೈಸ್ ಯೋಜನೆ’ ವಶಕ್ಕೆ ಪಡೆಯಲು ದೇವೇಗೌಡರ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

13404 ಎಕರೆ ರೈತರ ಭೂಮಿ ವಶಕ್ಕೆ ಆಗ್ರಹ | ಕ್ರಮ ಕೈಗೊಳ್ಳದ ಸಿಎಂ ಬಗ್ಗೆ ಮಾಜಿ ಪಿಎಂ ಬೇಸರ

ಬೆಂಗಳೂರು: ನೈಸ್ ಯೋಜನೆಯನ್ನು (ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸ್) ರಾಜ್ಯ ಸರ್ಕಾರ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ‘ಆ ಕಂಪನಿ ವಶದಲ್ಲಿರುವ 13404 ಎಕರೆಯಷ್ಟು ರೈತರ ಭೂಮಿಯನ್ನು ಸರ್ಕಾರ ಮರು ವಶಪಡಿಸಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಗ್ಗೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರೂ ಅವರು ಈವರೆಗೆ ಯಾವುದೇ ಕ್ರಮ ವಹಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
‘ಸಿದ್ದರಾಮಯ್ಯ ಬಡವರ ಪರ ಮಾತನಾಡುತ್ತಾರೆ. ಆ ಯೋಜನೆಯಲ್ಲಿ ಇಷ್ಟೊಂದು ಅಕ್ರಮ ಆಗಿದ್ದರೂ, ಬಡವರ ಭೂಮಿ ಲೂಟಿ ಹೊಡೆಯಲಾಗಿದ್ದರೂ ಏನು ಕ್ರಮ ತೆಗೆದುಕೊಂಡಿಲ್ಲ. ಬಡವರ ಪರ ಮಾತಾಡುವ ಸಿಎಂ ಯಾಕೆ ಕ್ರಮ ತೆಗೆದುಕೊಂಡಿಲ್ಲ’ ಎಂದು ಪ್ರಶ್ನಿಸಿದರು.
‘ಸಿದ್ದರಾಮಯ್ಯ ಅವರು ಎಷ್ಟು ವರ್ಷ ಆಳಿದರೂ ಈ ಕಪ್ಪುಚುಕ್ಕೆಯಿಂದ ಹೊರಗೆ ಬರಲು ಸಾಧ್ಯವಿಲ್ಲ. ಇದರ ವಿರುದ್ದ ಅವರು ಕ್ರಮ ತೆಗೆದುಕೊಳ್ಳದೇ ಹೋದರೆ ಅವರ ರಾಜಕೀಯ ಜೀವನಕ್ಕೆ ಇದೇ ಕಪ್ಪುಚುಕ್ಕೆಯಾಗಿ ಉಳಿದು ಹೋಗುತ್ತದೆ’ ಎಂದರು.
‘ನೈಸ್ ರಸ್ತೆ ಯೋಜನೆ ವಿಷಯ ಎಲ್ಲರಿಗೂ ಗೊತ್ತಿದೆ. ಅದರಲ್ಲಿ ಏನೇನು ನಡೆದಿದೆ ಎನ್ನುವುದೂ ತಿಳಿದಿದೆ. ಬಡವರಿಗೆ ಇದರಿಂದ ಅನ್ಯಾಯ ಆಗಿದೆ. ನಮ್ಮ ಪಕ್ಷ ಇದರ ವಿರುದ್ದ ದನಿ ಎತ್ತಿದೆ. ವಿಧಾನಸಭೆಯಲ್ಲೂ ಈ ಬಗ್ಗೆ ಸುದೀರ್ಘ ಚರ್ಚೆ ಆಗಿದೆ. ವಿಧಾನಸಭೆಯಲ್ಲಿ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಸದನ ಸಮಿತಿ ನೇಮಕ ಮಾಡಲಾಗಿತ್ತು. ಆ ಸದನ ಸಮಿತಿ ವರದಿ ಕೊಟ್ಟಿದೆ. ಎಷ್ಟು ಅಕ್ರಮ ಮಾಡಿದೆ, ಈ ಯೋಜನೆಯನ್ನು ಸರ್ಕಾರ ವಶಪಡಿಸಿಕೊಳ್ಳಬೇಕು ಎಂದು ವರದಿ ಕೊಟ್ಟಿದೆ. ಆದರೆ, ಸರ್ಕಾರ ಅಂತಿಮ ನಿರ್ಧಾರ ಮಾಡಿಲ್ಲ. ಇದಕ್ಕೆ ಕಾರಣ ಗೊತ್ತಿಲ್ಲ’ ಎಂದರು.
2023 ಅಕ್ಟೋಬರ್ 19 ರಂದು ನಾನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೆ. ನೈಸ್ ವಿಚಾರವಾಗಿ ಕ್ರಮಕ್ಕೆ ಆಗ್ರಹಿಸಿದ್ದೆ. ಈ ಬಗ್ಗೆ ಖುದ್ದು ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ ಎಂದು ಮಾಹಿತಿ ನೀಡಿದ ಮಾಜಿ ಪ್ರಧಾನಿಗಳು, ತಾವು ಬರೆದಿದ್ದ ಪತ್ರವನ್ನು ಮಾಧ್ಯಮಗೋಷ್ಟಿಯಲ್ಲಿ ಬಿಡುಗಡೆ ಮಾಡಿದರು.
‘13404 ಎಕರೆಯಷ್ಟು ರೈತರ ಭೂಮಿಯನ್ನು ನೈಸ್ ವಶಪಡಿಸಿಕೊಂಡಿದೆ. ಅದನ್ನು ಸರ್ಕಾರ ಮರು ವಶಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದೆ. ಈ ಯೋಜನೆಯ ಮೌಲ್ಯ 7 ಸಾವಿರ ಕೋಟಿ ಎಂದು ಸದನ ಸಮಿತಿಯೇ ವರದಿ ಕೊಟ್ಟಿದೆ; ಅಧಿಕಾರಿಗಳೇ ಈ ವರದಿ ಕೊಟ್ಟಿದ್ದಾರೆ. ಹಿಂದೆ ಸೋನಿಯಾ ಗಾಂಧಿ ಅವರ ಬಳಿಯು ಈ ಯೋಜನೆಯ ಅಕ್ರಮಗಳ ಚರ್ಚೆ ಆಗಿದೆ. ಧರ್ಮಸಿಂಗ್ ಅವರ ಕಾಲದಲ್ಲಿಯೂ ಚರ್ಚೆ ಆಗಿತ್ತು. ಆಗ ಸೋನಿಯಾಗಾಂಧಿ ಅವರು ಧರ್ಮಸಿಂಗ್ ಅವರಿಗೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದರು’ ಎಂದು ಮಾಜಿ ಪ್ರಧಾನಿಗಳು ಹೇಳಿದರು.
ಮಹಾನುಭಾವ ಸಿದ್ದರಾಮಯ್ಯನವರು ಇದನ್ನು ಸರಿ ಮಾಡಲಿ. ನಮ್ಮ ಪಕ್ಷ ನೈಸ್ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ನಾನು ನಮ್ಮ ಪಕ್ಷ, ರೈತರು, ಬಡವರ ಪರ ಹೋರಾಟ ಮಾಡುತ್ತೇವೆ’ ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.