ಮುದ್ದೇಬಿಹಾಳ: ಒಮ್ಮೆ ಮಾದಕ ವಸ್ತುಗಳ ಸೇವನೆಗೆ ಒಳಗಾದಲ್ಲ್ಲಿ ಅದರಿಂದ ಹೊರಬರುವದು ಕಷ್ಟ. ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಗೆ ಬಲಿಯಾದಲ್ಲಿ ನಿಮ್ಮ ಭವಿಷ್ಯ ಹಾಳುಮಾಡಿಕೊಳ್ಳುವದು ಮಾತ್ರವಲ್ಲದೇ ನಿಮ್ಮನ್ನೇ ನಂಬಿರುವ ನಿಮ್ಮ ತಂದೆ ತಾಯಿಗಳು ಸೇರಿದಂತೆ ಇಡೀ ಕುಟುಂಬದವರ ಬದುಕನ್ನೂ ನಾಶಮಾಡಿದಂತೆ ಎಂದು ಪಿಎಸ್‌ಐ ಸಂಜೀವ ತಿಪರೆಡ್ಡಿ ಹೇಳಿದರು.
ಪಟ್ಟಣದ ಜ್ಞಾನ ಭಾರತಿ ಶಾಲೆಯಲ್ಲಿ ಪೊಲೀಸ್ ಇಲಾಖೆ ಹಾಗೂ ಜ್ಞಾನ ಭಾರತಿ ಶಾಲೆಯ ಸಹದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಮಾದಕ ವಸ್ತುಗಳ ಸಾಗಾಣಿಕೆ ಹಾಗೂ ಮಾದಕ ವಸ್ತುಗಳ ಮಾರಾಟದ ಕುರಿತು ಮುಂಜಾಗ್ರತಾ ಕಾರ್ಯಕ್ರದಲ್ಲಿ ಅವರು ಮಾತನಾಡಿದರು.
ಮಾದಕ ವಸ್ತುಗಳಿಗೆ ಬಲಿಯಾದವರ ಪೈಕಿ ಅತೀ ಹೆಚ್ಚು ವಿದ್ಯಾರ್ಥಿಗಳೇ ಇದ್ದು ತಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಮಾಡಿಕೊಂಡು ಆಸ್ಪತ್ರೆಯಲ್ಲಿ ನರಳಿ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಗೋಜಿಗೆ ಹೋಗದೇ ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ದೊಡ್ಡ ಹುದ್ದೆಯನ್ನು ಅಲಂಕರಿಸಿ ಹೆತ್ತವರ ಮತ್ತು ದೇಶದ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು.
ಕ್ರೈಂ ಪಿಸೈ ಆರ್.ಎಲ್.ಮನ್ನಾಬಾಯಿ ಮಾತನಾಡಿದರು.
ಕಾರ್ಯಕ್ರಮಕ್ಕೂ ಮೊದಲು ಶಾಲೆಯಿಂದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು ಹಾಗೂ ಪೊಲೀಸ್ ಸಿಬ್ಬಂದಿ ಮಾದಕ ವಸ್ತುಗಳನ್ನು ಬಳಸದಂತೆ ಮತ್ತು ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ನಾಮಪಲಕಗಳನ್ನು ಹಿಡಿದು ಜಾಥಾ ನಡೆಸಿದರು.
ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯ ರಾಮಚಂದ್ರ ಹೆಗಡೆ ಸೇರಿದಂತೆ ಸಿಬ್ಬಂದಿ ಸಾಥ್ ನೀಡಿದರು.
Subscribe to Updates
Get the latest creative news from FooBar about art, design and business.
Related Posts
Add A Comment

