ವಿಜಯಪುರ: ಜಿಲ್ಲೆಯ ಮದಭಾವಿ-ಕವಲಗಿ ಹತ್ತಿರ ಶನಿವಾರ ಸಂಭವಿಸಿದ ಸಾರಿಗೆ ಬಸ್‌ಗಳ ಅಪಘಾತಕ್ಕೆ ಸಂಬಂಧಿಸಿದಂತೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲ ಅವರು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಗಾಯಾಳುಗಳನ್ನು ದಾಖಲಿಸಿರುವ ಆಸ್ಪತ್ರೆಯ ವೈದ್ಯಾಧಿಕಾರಿ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ಸೂಕ್ತ ಸೂಚನೆಗಳನ್ನು ನೀಡಿದ್ದಾರೆ.
ಅಪಘಾತದ ಸುದ್ದಿ ತಿಳಿದ ಕೂಡಲೇ ಸಚಿವರು, ಅಪಘಾತದ ಬಗ್ಗೆ ಮಾಹಿತಿ ಪಡೆದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ದೊರೆಯಲು ಅಗತ್ಯ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
