ವಿಜಯಪುರ: ಎಸ್. ಎಸ್. ಎಲ್. ಸಿ. ಮಕ್ಕಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣವಾಗಲು ಹಾಗೂ ಉತ್ತಮ ಅಂಕಗಳನ್ನು ಗಳಿಸಲು ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ನಾನು ಪಾಸ್ ಆಗುವೆ ಎನ್ನುವ ಶೀರ್ಷಿಕೆ ಅಡಿಯಲ್ಲಿ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಂಕಗಳನ್ನು ಗಳಿಸಲು ಅನುಕೂಲವಾಗುವಂತೆ, ನಾನೇ ಓದುವೇ ಎನ್ನುವ ಶೀರ್ಷಿಕೆ ಅಡಿಯಲ್ಲಿ ವಿಜಯಪುರ ಗ್ರಾಮೀಣ ವಲಯದ ವಿಷಯ ಸಂಪನ್ಮೂಲ ಶಿಕ್ಷಕರು ಸೇರಿ ರಚಿಸಿರುವ ಪ್ರಶ್ನೆ ಕೋಟಿಯನ್ನು ವಿಜಯಪುರ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗ ಕೆ. ಹೊಂಗಯ್ಯ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ ಬಳೋಲಮಟ್ಟಿ ಅವರು ಹಾಗೂ ಸಂಪನ್ಮೂಲ ಶಿಕ್ಷಕರೊಂದಿಗೆ ಪ್ರಶ್ನೆ ಭಂಡಾರವನ್ನು ಬಿಡುಗಡೆಗೊಳಿಸಿದರು.
ಈ ಪ್ರಶ್ನೆಗಳ ಸಂಗ್ರಹವನ್ನು ವಲಯದ ಎಲ್ಲಾ ಪ್ರೌಢಶಾಲೆಯ ಮುಖ್ಯ ಗುರುಗಳು ಮಕ್ಕಳಿಗೆ ತಲುಪುವಂತೆ ಕ್ರಮ ವಹಿಸಲು ಕೆ. ಹೊಂಗಯ್ಯ ಅವರು ತಿಳಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

