ಆಲಮಟ್ಟಿ: ಔಷಧ ವ್ಯಾಪಾರವು ಸೇವಾ ಮನೋಧರ್ಮ ವ್ಯಾಪಾರವಾಗಿದ್ದು, ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಔಷಧ ವ್ಯಾಪಾರಿಗಳ ಪಾತ್ರ ಮಹತ್ವದ್ದಾಗಿದೆ. ಆದ್ದರಿಂದ ಔಷಧ ವ್ಯಾಪಾರಿಗಳು ಬಹು ಎಚ್ಚರಿಕೆಯಿಂದ ವಹಿವಾಟು ನಡೆಸಬೇಕು ಎಂದು ವಿಜಯಪುರದ ಸಹಾಯಕ ಔಷಧ ನಿಯಂತ್ರಕ ಆರ್. ಪರಶುರಾಮ ಹೇಳಿದರು.
ಭಾನುವಾರ, ಇಲ್ಲಿಯ ಸಮುದಾಯ ಭವನದಲ್ಲಿ ಜರುಗಿದ ವಿಜಯಪುರ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ ಹಾಗೂ ಔಷಧೀಯ ಕ್ಷೇತ್ರದಲ್ಲಿ ನೂತನ ಆವಿಷ್ಕಾರದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಔಷಧ ಕ್ಷೇತ್ರದಲ್ಲಿ ನಿತ್ಯವೂ ಹೊಸ ಹೊಸ ಸಂಶೋಧನೆಗಳು ನಡೆಯುತ್ತಿರುತ್ತವೆ, ಸಾಕಷ್ಟು ಬದಲಾವಣೆಗಳು ಆಗಿರುತ್ತವೆ, ಅವುಗಳ ಬಗ್ಗೆ ಕಾರ್ಯಾಗಾರ ಏರ್ಪಡಿಸಿರುವುದರಿಂದ ಔಷಧ ವ್ಯಾಪಾರಸ್ಥರಿಗೆ ಪರಿಣಿತಿ ಹೊಂದಲು ಸಹಾಯವಾಗಲಿದೆ ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಜಯಪುರ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಕೆ.ಆರ್. ಎತ್ತಿನಮನಿ ಮಾತನಾಡಿದರು.
ಸಹಾಯಕ ಔಷಧ ನಿಯಂತ್ರಕಿ ಶ್ವೇತಾ ನಾಗಠಾಣ, ಮನೋವೈದ್ಯಶಾಸ್ತ್ರದ ಪ್ರಾಧ್ಯಾಪಕ ಡಾ ಸಂತೋಷ ರಾಮದುರ್ಗ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತ ಅಧಿಕಾರಿ ಆರ್.ಎಸ್. ಬಿರಾದಾರ, ಔಷಧ ವ್ಯಾಪಾರಸ್ಥರ ಸಂಘದ ಉಪಾಧ್ಯಕ್ಷ ರಮೇಶ ಯಳಮೇಲಿ, ಗೌರವ ಕಾರ್ಯದರ್ಶಿ ಸಂಗಮೇಶ ಗುಡ್ಡೋಡಗಿ, ಡಾ ಸತೀಶ ಘಾಟಗೆ ಮತ್ತೀತರರು ಇದ್ದರು.
ಉತ್ತಮ ಔಷಧ ವ್ಯಾಪಾರಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
Subscribe to Updates
Get the latest creative news from FooBar about art, design and business.
Related Posts
Add A Comment

