Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರ ಹಲಸಂಗಿ ಗೆಳೆಯರ ಅಧ್ಯಯನ ಪೀಠ ಸ್ಥಾಪಿಸಲಿ
(ರಾಜ್ಯ ) ಜಿಲ್ಲೆ

ಸರ್ಕಾರ ಹಲಸಂಗಿ ಗೆಳೆಯರ ಅಧ್ಯಯನ ಪೀಠ ಸ್ಥಾಪಿಸಲಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಜಾಪ ಆಲಮೇಲ ತಾಲೂಕು ಘಟಕದ ಉದ್ಘಾಟನೆ | ರಾಜ್ಯಾಧ್ಯಕ್ಷ ಡಾ.ಎಸ್ ಬಾಲಾಜಿ ಆಗ್ರಹ

ಆಲಮೇಲ: ಜಾನಪದ ಸಂಸ್ಕೃತಿಯು ಗಟ್ಟಿಯಾದ ತಳಹದಿಯಲ್ಲಿ ಹುಟ್ಟಿ ವಿಶಾಲವಾದ ಮನೋಭೂಮಿಕೆಯಲ್ಲಿ ಹರಡಿಕೊಂಡಿದೆ. ಸಾರ್ವತ್ರಿಕ ಮೌಲ್ಯಗಳಾದ ಪ್ರೀತಿ, ಕರುಣೆ, ಸಹನೆ, ಸಮಾನತೆ, ಭಾವೈಕ್ಯತೆ, ಸಹಬಾಳ್ವೆ ಮತ್ತು ಆರೋಗ್ಯಕರ ವಿಷಯಾದಿಗಳು ಜಾನಪದ ಸಂಸ್ಕೃತಿಯ ಆಶಯವಾಗಿವೆ. ಜಾನಪದ ಇಂದು ರೂಪ ಬದಲಾಯಿಸಿದರೂ ತತ್ವ -ಚಿಂತನೆಗಳು ಬದಲಾಗಿಲ್ಲ. ಅದಕ್ಕಾಗಿ ಜಾನಪದಕ್ಕೆ ಎಂದಿಗೂ ಅಳಿವಿಲ್ಲ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಎಸ್ ಬಾಲಾಜಿ ಅಭಿಪ್ರಾಯಪಟ್ಟರು.
ತಾಲೂಕಿನ ಕಡಣಿ ಗ್ರಾಮದ ಶಂಕರಲಿಂಗೇಶ್ವರ ದೇವಾಲಯದಲ್ಲಿ ಪೂಜ್ಯ ಸಿದ್ದೇಶ್ವರ ಸ್ವಾಮೀಜಿ ಮಂಟಪದ ಗೀಗೀಪದಕಾರ ಕಡಣಿ ಕಲ್ಲಪ್ಪ ವೇದಿಕೆಯಲ್ಲಿ, ಕನ್ನಡ ಜಾನಪದ ಪರಿಷತ್ ಆಲಮೇಲ ತಾಲೂಕು ಘಟಕದ ಉದ್ಘಾಟನೆ ಮಾಡಿ ಮಾತನಾಡುತ್ತಾ ಹಲಸಂಗಿ ಗೆಳೆಯರ ಬಳಗದ ಜಾನಪದ ಸೇವೆ ನಾಡಿಗೆ ಅನನ್ಯವಾದುದು. ಸರಕಾರ ಹಲಸಂಗಿ ಗೆಳೆಯರ ಅಧ್ಯಯನ ಪೀಠ ಸ್ಥಾಪಿಸಬೇಕೆಂದು ಆಗ್ರಹಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ (ಪಡಗಾನೂರ) ಮಾತನಾಡಿ, ಹಳ್ಳಿಗಳು ಜಾನಪದ ಸಂರಕ್ಷಿಸುವ ಮೂಲ ನೆಲೆಗಳಾಗಿವೆ.ಜಾನಪದ ಕಲಾವಿದರು ನಮ್ಮ ಸಂಸ್ಕೃತಿಯ ರೂವಾರಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಕಲಾವಿದರಿಗೆ ಸಾಕಷ್ಟು ಅನಕೂಲ ಮಾಡುತ್ತಿದೆ. ಸರಕಾರದ ನಿಯಮಾನುಸಾರ ಕಲಾಪ್ರದರ್ಶನ ಮಾಡಿ ಸೌಲಭ್ಯ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಕ ಜಾ ಪ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪುಂಡಲೀಕ ಮುರಾಳ ನೂತನ ಪದಾಧಿಕಾರಿಗಳಿಗೆ ಪದಪತ್ರ ನೀಡಿ ಜಿಲ್ಲೆಯಲ್ಲಿ ಪರಿಷತ್ತಿನ ಕಾರ್ಯ ಚಟುವಟಿಕೆ ಕುರಿತು ಮಾತನಾಡಿದರು.
ತಾಲೂಕು ಘಟಕದ ನೂತನ ಅಧ್ಯಕ್ಷ ಗಿರೀಶ ಕಂಬಾರ ಪ್ರಾಸ್ತಾವಿಕವಾಗಿ ಮಾತನಾಡಿದರು . ಗ್ರಾಪಂ ಅಧ್ಯಕ್ಷ ಬಸವಲಿಂಗಪ್ಪ ಕತ್ತಿ ಮತ್ತು ಗ್ರಾ ಪಂ ಸದಸ್ಯ ಸಂತೋಷ ಕ್ಷತ್ರಿ ಮಾತನಾಡಿದರು.
ವೇದಿಕೆಯಲ್ಲಿ ರಾಚಯ್ಯ ಮಠ, ಗ್ರಾ ಪಂ ಸದಸ್ಯ ಬಸವರಾಜ ತಾವರಗೇರಿ, ಪಿಕೆಪಿಎಸ್ ಉಪಾಧ್ಯಕ್ಷ ಈರಯ್ಯ ಗಂಗನಳ್ಳಿ, ಎಸ್ ಡಿ ಎಂ ಸಿ ಅಧ್ಯಕ್ಷ ಆನಂದಗೌಡ ಪಾಟೀಲ, ಗಂಗಾಧರ ಶ್ರೀಗಿರಿ, ಶಿವನಗೌಡ ಪಾಟೀಲ, ಡಾ.ಮಲ್ಲು ಪ್ಯಾಟಿ, ಈರಣ್ಣ ಸುತಾರ ಅತಿಥಿಗಳಾಗಿದ್ದರು.
ತಾಲೂಕಿನ ವಿವಿಧ ಜಾನಪದ ಕಲಾವಿದರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಭಜನೆ, ಡೊಳ್ಳಿನಪದ, ಕೋಲಾಟ, ಷಹನಾಯಿ, ಸಂಪ್ರದಾಯಪದ ಕಲಾಪ್ರದರ್ಶನ ನಡೆಯಿತು.
ಸಾಯಿಬಣ್ಣ ತಾವರಗೇರಿ ನಿರೂಪಿಸಿದರು. ಪುಂಡಲೀಕ ಸುರಗಿಹಳ್ಳಿ ಸ್ವಾಗತಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.