Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾನುವಾರು ಜಾತ್ರೆ ವ್ಯವಸ್ಥಿತ ಆಯೋಜನೆಗೆ ಸಚಿವರ ಸೂಚನೆ
(ರಾಜ್ಯ ) ಜಿಲ್ಲೆ

ಜಾನುವಾರು ಜಾತ್ರೆ ವ್ಯವಸ್ಥಿತ ಆಯೋಜನೆಗೆ ಸಚಿವರ ಸೂಚನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತೊರವಿಯಲ್ಲಿ ಜ.೧೦ರಿಂದ ೧೮ರವರೆಗೆ ಜರುಗುವ ಸಂಕ್ರಮಣ ಸಿದ್ದೇಶ್ವರ ಜಾನುವಾರು ಜಾತ್ರೆ

ವಿಜಯಪುರ: ಪ್ರತಿ ವರ್ಷದಂತೆ ವಿಜಯಪುರ ತಾಲೂಕಿನ ತೊರವಿಯಲ್ಲಿ ಜ.೧೦ರಿಂದ ೧೮ರವರೆಗೆ ಜರುಗುವ ಸಂಕ್ರಮಣ ಸಿದ್ದೇಶ್ವರ ಜಾನುವಾರು ಜಾತ್ರೆಯನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುವಂತೆ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಿದ್ದೇಶ್ವರ ಜಾನುವಾರು ಜಾತ್ರೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಾನುವಾರು ಜಾತ್ರೆಯಲ್ಲಿ ಗಡಿ ಭಾಗವಾಗಿರುವುದರಿಂದ ಮಹಾರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ರೈತರು, ಜಾನುವಾರುಗಳು ಆಗಮಿಸಲಿರುವುದರಿಂದ ಸೂಕ್ತ ಲಸಿಕಾಕರಣ, ಜಾತ್ರೆಯಲ್ಲಿ ಭಾಗವಹಿಸಿದ ರೈತರಿಗೆ ನಿರಂತರವಾಗಿ ಕುಡಿಯುವ ನೀರಿನ ವ್ಯವಸ್ಥೆ, ಜಾತ್ರೆ ಸ್ಥಳದಲ್ಲಿ ಸ್ವಚ್ಚತೆ, ಒಂದು ವಾರಗಳ ಕಾಲಕ್ಕೂ ಹೆಚ್ಚಿನ ದಿನ ಜಾತ್ರೆ ನಡೆಯುವುದರಿಂದ ಸಮರ್ಪಕ ವಿದ್ಯುತ್ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಯಾವುದೇ ಅಡೆ-ತಡೆವಾಗದಂತೆ ನೋಡಿಕೊಂಡು ವ್ಯವಸ್ಥಿತವಾಗಿ ಜಾತ್ರೆ ಆಯೋಜಿಸುವಂತೆ ಅವರು ಸೂಚನೆ ನೀಡಿದರು.
ಜಾತ್ರೆಯಲ್ಲಿ ಅಂದಾಜು ೫೦ ರಿಂದ ೬೦ ಸಾವಿರ ಜಾನುವಾರುಗಳಿಗೆ ಬರುವ ಸಾಧ್ಯತೆ ಇರುವುದರಿಮದ ಜಾನುವಾರುಗಳಿಗೆ ರೋಗ ನಿರೋಧ ಲಸಿಕೆ ನೀಡಲು, ಸುಮಾರು ೫೦ ಜನ ಪಶುವೈದ್ಯಕೀಯ ಪದವೀಧರರನ್ನು ಆಹ್ವಾನಿಸಿ ಅವರಿಂದ ಜಾನುವಾರುಗಳಿಗೆ ವ್ಯವಸ್ಥಿತವಾಗಿ ಕಟ್ಟಲು ಹಾಗೂ ಹೊಸ ಹೊಸ ತಳಿಯ ಜಾನುವಾರುಗಳ ಪ್ರದರ್ಶನ ಹಾಗೂ ಜಾತ್ರೆಯಲ್ಲಿ ವಿವಿಧ ವಸ್ತು ಪ್ರದರ್ಶನ ಮಳಿಗೆಗಳ ಆಯೋಜನೆಗೆ ಅವರು ಸೂಚಿಸಿದರು.
ಒಂದು ವಾರಕ್ಕೂ ಹೆಚ್ಚಿನ ಕಾಲ ಜಾತ್ರೆ ನಡೆಯುವುದರಿಂದ ಚಳಿಗಾಲವಿರುವುದರಿಂದ ಜಾನುವಾರುಗಳಿಗೆ ರೋಗ-ರುಜಿನಗಳು ಬರುವ ಸಾಧ್ಯತೆ ಇರುತ್ತದೆ. ಮುಂಜಾಗ್ರತಾ ಕ್ರಮವಾಗಿ ಲಸಿಕೆ, ಔಷದಿಗಳ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು. ಸೂಕ್ತ ವೈದ್ಯೋಪಚಾರಕ್ಕೆ ಪಶು ವೈದ್ಯಾಧಿಕಾರಿಗಳನ್ನು ನೇಮಿಸಿ, ೩ ತಂಡಗಳನ್ನು ರಚಿಸಿ ವೈದ್ಯಕೀಯ ಸೇವೆ ಒದಗಿಸಬೇಕು. ಅತಿ ಹೆಚ್ಚು ಜನರು ಭಾಗವಹಿಸುವುದರಿಂದ ಸಾರ್ವಜನಿಕರು, ರೈತರ ಅನುಕೂಲಕ್ಕಾಗಿ ಆರೋಗ್ಯ ತಪಾಸಣಾ ಕೇಂದ್ರ, ಜಾನುವಾರು ಜಾತ್ರೆಯಲ್ಲಿ ಜಾನುವಾರುಗಳಿಗೆ ರೋಗಗಳು ಹರಡುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಔಷಧಿ ಸಿಂಪರಣೆ (ಫಾಗಿಂಗ್) ಹಾಗೂ ಜಾತ್ರೆಯಲ್ಲಿ ದಿನನಿತ್ಯ ಶೇಖರಣೆಯಾಗುವ ಕಸವನ್ನು ತೆರವುಗೊಳಿಸಿ, ಸ್ವಚ್ಛತೆ ಕಾಪಾಡುವುದು ಸೇರಿದಂತೆ ಮಹಾನಗರ ಪಾಲಿಕೆಯಿಂದ ಪಬ್ಲಿಕ್ ಮೊಬೈಲ್ ಶೌಚಾಲಯ ವ್ಯವಸ್ಥೆ, ಹೆಸ್ಕಾಂದಿಂದ ತಾತ್ಕಾಲಿಕವಾಗಿ ವಿದ್ಯುತ್ ವ್ಯವಸ್ಥೆ, ಬೀದಿ ದೀಪಗಳ ಅಳವಡಿಕೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು.
ಜಾನುವಾರು ಜಾತ್ರೆಗೆ ಹೋಗಿ ಬರಲು ಅನುಕೂಲವಾಗುವಂತೆ ಕೇಂದ್ರ ಬಸ್ ನಿಲ್ದಾಣದಿಂದ ಸೂಕ್ತ ಸಾರಿಗೆ ವ್ಯವಸ್ಥೆ, ಮುಖ್ಯ ರಸ್ತೆಯಿಂದ ಜಾನುವಾರು ಜಾತ್ರೆ ಸ್ಥಳಕ್ಕೆ ಹೋಗುವ ರಸ್ತೆಯನ್ನು ಸುಗಮಗೊಳಿಸಿ, ಜಾತ್ರೆ ಹೋಗುವ ರೈತರಿಗೆ ಅನುಕೂಲ ಕಲ್ಪಿಸುವುದು, ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ ವಾಹನ ನಿಲುಗಡೆ, ಪೋಲಿಸ್ ಬಂದೋಬಸ್ತ, ಹಾಗೂ ಪ್ರತಿ ದಿನ ಸಂಜೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿ ಕಾರ್ಯಕ್ರಮಗಳ ಆಯೋಜನೆ ಹಾಗೂ ಜಾನುವಾರುಗಳ ಮಾರಾಟದ ನಂತರ ರಸೀದಿ ನೀಡುವ ಸಂದರ್ಭದಲ್ಲಿ ಜಾನುವಾರುಗಳನ್ನು ಮಾರಾಟ ಮಾಡುವವರು ಹಾಗೂ ಕೊಳ್ಳುವವರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಆಧಾರ ಸಂಖ್ಯೆ ಪಡೆದುಕೊಳ್ಳುವಂತೆ ಮತ್ತು ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೊನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮಹಾನಗರ ಪಾಲಿಕೆ ಆಯುಕ್ತ ಬದ್ರೂದ್ದಿನ ಸೌದಾಗರ, ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ತಹಶೀಲ್ದಾರ ಶ್ರೀಮತಿ ಕವಿತಾ ಆರ್. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಶ್ರೀಮತಿ ಎಂ.ವಿ.ಶೈಲಜಾ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಅಶೋಕ ಘೊಣಸಗಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.