ವಿಜಯಪುರ: ಸಿದ್ದೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ ಜಾನುವಾರಗಳ ಪ್ರದರ್ಶನ ನಡೆಯಲಿದ್ದು, ರೈತರು ತಮ್ಮ ಜಾನುವಾರುಗಳನ್ನು ಶ್ರೀ ಸಿದ್ದೇಶ್ವರ ಜಾನುವಾರು ಜಾತ್ರೆಯಲ್ಲಿ ಪ್ರದರ್ಶಿಸುವಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಕರೋನಾ ಮಹಾಮಾರಿಯಿಂದ ಜಾನುವಾರಗಳ ಜಾತ್ರೆ ನಡೆದಿರಲಿಲ್ಲ. ಹಾಗಾಗಿ ಈ ವರ್ಷ ಜಾನುವಾರು ಜಾತ್ರೆಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ರೈತರು ತಮ್ಮ ಜಾನುವಾರುಗಳನ್ನು ಪ್ರದರ್ಶಿಸಬಹುದಾಗಿದ್ದು, ಉತ್ತಮ ಜಾನುವಾರಗಳಿಗೆ ಸೂಕ್ತ ಬಹುಮಾನವನ್ನು ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
