ವಿಜಯಪುರ: ಗ್ರಾಹಕರು ತಮ್ಮ ಹಕ್ಕಿನ ಬಗ್ಗೆ ಅರಿವು ಹೊಂದಬೇಕು. ಇದಕ್ಕೆ ಸಂಬಂಧಿಸಿದ ಇಲಾಖೆಗಳು ಗ್ರಾಹಕರ ಹಕ್ಕುಗಳು ಮತ್ತು ಕಾನೂನುಗಳ ಅರಿವು ಮೂಡಿಸಬೇಕು ಎಂದು ವಿಜಯಪುರ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಸ್ ಕುಂದರ್ ಅವರು ಹೇಳಿದರು.
ಅವರು ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಆಹಾರ ಸುರಕ್ಷತಾ ಇಲಾಖೆ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ನ್ಯೂ ಸಂಸ್ಥೆ ವಿಜಯಪುರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ -೨೦೨೩ರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲರೂ ಗ್ರಾಹಕ ಕಾನೂನು ಸೇವೆಗಳ ಅರಿವು ಹೊಂದಿರಬೇಕು. ಇಲಾಖೆಗಳು ಗ್ರಾಹಕರಿಗೆ ಕಾನೂನಿನ ಅರಿವು ಮೂಡಿಸಬೇಕು. ಖರೀದಿಸುವ ವಸ್ತುಗಳ ಬಗ್ಗೆ ತಿಳುವಳಿಕೆ ಹೊಂದಿರಬೇಕು. ತಾವು ಕೊಂಡುಕೊಳ್ಳುವ ವಸ್ತುವಿನ ಮೇಲೆ ಮುದ್ರಿಸಿದ ಅಂಶಗಳನ್ನು ಗಮನಿಸಬೇಕು. ಗ್ರಾಹಕರು ತಾವು ಖರೀದಿಸುವ ವಸ್ತುಗಳಿಗೆ ರಸೀದಿ ಪಡೆದುಕೊಳ್ಳಬೇಕು ಎಂದು ಹೇಳಿದರು.
ಅತಿಥಿ ಉಪನ್ಯಾಸಕರಾಗಿ ಆಗಮಿಸಿದ ವಿಜಯಪುರ ಬಳಕೆದಾರರ ಸಂಘದ ಅಧ್ಯಕ್ಷ ಹಾಗೂ ನ್ಯಾಯವಾದಿ ಎಂ.ಜಿ. ಮಠಪತಿ ಇ-ಕಾಮರ್ಸ ಮತ್ತು ಡಿಜಿಟಲ್ ಯುಗದಲ್ಲಿ ಗ್ರಾಹಕರ ರಕ್ಷಣೆ ವಿಷಯದ ಬಗ್ಗೆ ಉಪನ್ಯಾಸ ನೀಡಿ, ಡಿಜಿಟಲ್ ಹೆಸರಿನಲ್ಲಿ ಹಲವರು ಮೋಸಕ್ಕೊಳಗಾಗುತ್ತಿರುವುದು. ಆನ ಲೈನ್ ವಂಚನೆ ಬಗ್ಗೆ ಜಾಗೃತರಾಗಿರಬೇಕು.
ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ವಿದ್ಯಾ ಗಲಗಲಿ,ವಿಜಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎ.ಆಯ್. ವಿಜಯಪುರ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಕಾಂತ ಬುರಣಪೂರ, ವಿಜಯಪುರ ಕೆಎಫ್ ಸಿಎಸ್‌ಪಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಡಿ.ಆರ್ ನಾಯ್ಕೊಡಿ, ವಿಜಯಪುರ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ನ್ಯೂ ಸಂಸ್ಥೆಯ ಅಧ್ಯಕ್ಷರಾದ ಡಾ. ಎಸ್.ಎಂ ಕರೇಕಲ್ ಉಪಸ್ಥಿತರಿದ್ದರು.
ಪ್ರಾರ್ಥನೆ ಗೀತೆಯನ್ನು ಸೃಷ್ಟಿ ಬಿರಾದರ ಹಾಗೂ ಸುಮಾ ಬಿರಾದರ ನೇರವೇರಿಸಿದರು. ವಿಜಯಪುರ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಎಂ.ಎಸ್. ಅರಕೇರಿ ಸ್ವಾಗತಿಸಿದರು.
*ಪ್ರಾತ್ಯಕ್ಷಿಕೆಗಳ ಪ್ರದರ್ಶನ:* ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳಿಗಾಗಿ ಪ್ರಾತ್ಯಕ್ಷಿಕೆಗಳನ್ನ ಏರ್ಪಡಿಸಲಾಗಿತ್ತು. ದಿನನಿತ್ಯ ಬಳಸುವ ಆಹಾರ ಪದಾರ್ಥಗಳಲ್ಲಿ ಕಲಬೆರಕೆ ಅವುಗಳಿಂದ ಆರೋಗ್ಯದ ಮೇಲೆ ಬೀರುವ ದುಷ್ಪಪರಿಣಾಮಗಳ ಬಗ್ಗೆ ತಿಳಿಸಲಾಯಿತು. ಗ್ಯಾಸ್ ಸಿಲಿಂಡರ್ ಉಪಯೋಗಿಸುವ ಬಗೆ,ಅವುಗಳ ಬಿಡಿಭಾಗಗಳ ದುರಸ್ತಿ ಕುರಿತ ಮಾಹಿತಿ ನೀಡಲಾಯಿತು.
Subscribe to Updates
Get the latest creative news from FooBar about art, design and business.
Related Posts
Add A Comment

