ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ ರಾಂಪೂರ (ಪಅ) ನಿಮಪೋ ವೃತ್ತದಡಿ ಬರುವ ಇಂಡಿ ಶಾಖಾ ಕಾಲುವೆ ಹಾಗೂ ಇಂಡಿ ಏತ ನೀರಾವರಿ ಕಾಲುವೆಗಳಡಿ ಬರುವ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆಗಳನ್ನು ಸಂರಕ್ಷಿಸಲು ಜ.೮ ರಿಂದ ೧೧ ರವರೆಗೆ ನೀರು ಹರಿಸಲಾಗುವುದು ಎಂದು ಕೆಬಿಜೆಎನ್‌ಎಲ್ ರಾಂಪೂರ ವೃತ್ತದ ಅಧೀಕ್ಷಕ ಅಭಿಯಂತರ ಮನೋಜಕುಮಾರ ಗಡಬಳ್ಳಿ ಅವರು ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರೂ ಆದ ಕೃಷ್ಣಾ ಮೇಲ್ಕಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಹಾಗೂ ಅಚ್ಚು ಕಟ್ಟು ಪ್ರದೇಶದ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು, ರೈತ ಮುಖಂಡರೊಂದಿಗೆ ಜ.೬ ರಂದು ನಡೆದ ವಿಡಿಯೋ ಸಂವಾದ ಸಭೆಯ ನಿರ್ಣಯದಂತೆ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಕ್ಕೆ ನಾರಾಯಣಪುರ ಜಲಾಶಯದಿಂದ ೦೩ ದಿನ ನೀರನ್ನು ಹರಿಸಲು ನೀಡಿದ ನಿರ್ದೇಶನದಂತೆ ಕಾಲುವೆ ಮೂಲಕ ೨.೭೫ ಟಿಎಂಸಿ ನೀರನ್ನು ಹರಿಸಲಾಗುವುದು.
ಈ ಅವಧಿಯಲ್ಲಿ ಕಾಲುವೆ ಚಾಜಲ ಗೇಟ್‌ಗಳಿಗೆ ಹಾನಿ ಮಾಡುವುದು, ಎಸ್ಕೇಪ್ ಮೂಲಕ ಹಳ್ಳಕ್ಕೆ ನೀರು ಹರಿಸುವುದು, ಸೈಪನಗಳ ಮೂಲಕ ಮಣ್ಣಿನ ಏರಿಯಲ್ಲಿ ನೀರನ್ನು ಎತ್ತಿಕೊಳ್ಳುವುದು, ಕಾಲುವೆ ಜಾಲದಲ್ಲಿ ಪಂಪುಗಳ ಮೂಲಕ ನೀರನ್ನು ಎತ್ತುವುದನ್ನು ನಿಬಂಧಿಸಲಾಗಿದ್ದು, ರೈತ ಬಾಂಧವರು ನೀರಿನ ಬಳಕೆಯಲ್ಲಿ ಮಿತವ್ಯಯ ಸಾಧಿಸುವ ಮೂಲಕ ಕೃಷ್ಣಾ ಭಾಗ್ಯ ಜಲನಿಗಮದೊಂದಿಗೆ ಸಹಕರಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

