ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರನ್ನು ಬಿಡುಗಡೆ ಮಾಡುವ ಸುದ್ದಿ ತಿಳಿಯುತ್ತಿದ್ದಂತೆ ಕರವೇ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಶೋಕ ಹಾರಿವಾಳ ನೇತೃತ್ವದಲ್ಲಿ ಸೋಮವಾರ ರಾತ್ರಿ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಪಟಾಕ್ಷಿ ಸಿಡಿಸಿ, ಸಿಹಿ ಹಂಚಿ ಸಂತಸ ಪಟ್ಟರು.
ಈ ಸಂದರ್ಭದಲ್ಲಿ ಅಶೋಕ ಹಾರಿವಾಳ ಮಾತನಾಡಿ, ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಈಚೆಗೆ ನಾರಾಯಣಗೌಡ ಅವರ ನೇತೃತ್ವದಲ್ಲಿ ದೊಡ್ಡ ಪ್ರಮಾಣದಲ್ಲಿ ಹೋರಾಟ ನಡೆದಿತ್ತು. ಈ ಸಂದರ್ಭದಲ್ಲಿ ನಮ್ಮ ಸಂಘಟನೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿದಂತೆ ೨೯ ಜನರನ್ನು ಏಕಾಏಕಿ ಬಂಽಸಲಾಗಿತ್ತು. ಇದೀಗ ಅವರಿಗೆ ಬಿಡುಗಡೆ ಭಾಗ್ಯ ದೊರೆತಿರುವುದು ನಮ್ಮ ಎಲ್ಲ ಕಾರ್ಯಕರ್ತರಿಗೆ ಸಂತಸ ತಂದಿದೆ. ನಮ್ಮ ಸಂಘಟನೆಯ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಕನ್ನಡ ನಾಡಿನಲ್ಲಿ ಕನ್ನಡ ಭಾಷೆ ರಕ್ಷಣೆಗಾಗಿ ನಿರಂತರವಾಗಿ ಹೋರಾಟ ಮಾಡುತ್ತಿರುವ ನಾರಾಯಣಗೌಡ ಅವರಿಗೆ ಯಾವಾಗಲೂ ನಮ್ಮ ಕಾರ್ಯಕರ್ತರು ಬೆಂಬಲವಾಗಿ ಇರುತ್ತಾರೆ ಎಂದರು.
ಈ ಸಂದರ್ಭದಲ್ಲಿ ಬಸವರಾಜ ಹೂಗಾರ, ರವಿ ಗೊಳಸಂಗಿ, ಸುರೇಶ ಜಗದಾಳೆ, ಶ್ರೀಶೈಲ ಹೂಗಾರ, ಮಂಜು ಮಣ್ಣೂರ, ಮಡುಗೌಡ ಭಾವಿಕಟ್ಟಿ, ವಿಶ್ವನಾಥ ಗಬ್ಬೂರ, ಹಣಮಂತ ಟಕ್ಕಳಕಿ, ಸೃಜನ ಫಿರಂಗಿ, ಬಸು ರಾಯಗೊಂಡ, ಶಿವು ಉಕ್ಕಲಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

