ದೇವರಹಿಪ್ಪರಗಿ: ಸಿದ್ಧೇಶ್ವರ ಸ್ವಾಮೀಜಿಯವರ ನಡೆ, ನುಡಿ ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಿವೆ ಎಂದು ಶ್ರೀಸಿದ್ಧೇಶ್ವರ ಸ್ವಾಮೀಜಿ ಪ್ರೌಢಶಾಲೆಯ ಸಂಸ್ಥಾಪಕ ಅಧ್ಯಕ್ಷ ವ್ಹಿ.ಕೆ.ಪಾಟೀಲ ಹೇಳಿದರು.
ಪಟ್ಟಣದ ಶ್ರೀಸಿದ್ಧೇಶ್ವರ ಸ್ವಾಮೀಜಿ ಪ್ರೌಢಶಾಲೆಯ ಆವರಣದಲ್ಲಿ ಸೋಮವಾರ ಜರುಗಿದ ಮಾಸಿಕ ಪಾಲಕರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿಕೊಂಡು ಸಿದ್ಧೇಶ್ವರ ಸ್ವಾಮೀಜಿ ಅವರಿಗೆ ಪೂಜೆ ಹಾಗೂ ನುಡಿನಮನ ಸಲ್ಲಿಸಿ ಅವರು ಮಾತನಾಡಿದರು.
ಸಂಸ್ಥೆಯಲ್ಲಿ ಅಧ್ಯಯನಿಸುವ ಪ್ರತಿ ಮಗುವಿಗೆ ಸ್ವಾಮೀಜಿಗಳ ಆಶಯದಂತೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಲು ಸಿಬ್ಬಂದಿಗಳು ಸೇರಿದಂತೆ ಪಾಲಕರ ಆಶಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದರು.
ಶಿಕ್ಷಕರಾದ ವಿವೇಕಾನಂದ ಹಿರೇಮಠ, ಶ್ರೀಕಾಂತ ತೋಳನೂರ ಮಾತನಾಡಿದರು.
ನಂತರ ಪ್ರಾಥಮಿಕ ಹಾಗೂ ಮಾಧ್ಯಮಿಕ ವಿಭಾಗಗಳ ಮಾಸಿಕ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ತೋರಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಶಿಕ್ಷಕ ಕಾಶೀನಾಥ ಯಂಭತ್ನಾಳ ಮಾರ್ಗದರ್ಶನದಲ್ಲಿ ವಿಜ್ಞಾನದ ವಿವಿಧ ವಿಷಯಗಳ ಮೇಲೆ ವಿದ್ಯಾರ್ಥಿಗಳು ಬಿಡಿಸಿದ ರಂಗೋಲಿ ಚಿತ್ರಗಳು ಗಮನ ಸೆಳೆದವು.
ಶಿಕ್ಷಕರಾದ ಮಹಾಂತೇಶ ಬೀಳಗಿಮಠ, ಆನಂದ ಎ.ಕೆ, ಎಂ.ಎಸ್.ಪಾಟೀಲ, ರವಿ ಅಲೇಗಾಂವಿ, ಪಾಲಕರ ಪ್ರತಿನಿಧಿ ಎಂ.ಬಿ.ಬಿರಾದಾರ ಸೇರಿದಂತೆ ಸಿಬ್ಬಂದಿ, ಮಕ್ಕಳು ಹಾಗೂ ಪಾಲಕರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

