ಇಂಡಿ: ತಾಲೂಕಿನ ಹಿರೇರೂಗಿ ಗ್ರಾಮದ ಕೆಜಿಎಸ್ ಶಾಲೆಯ ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಸುದರ್ಶನ ಬೇನೂರ ಮತ್ತು ಉಪಾಧ್ಯಕ್ಷರಾಗಿ ಪರಶುರಾಮ ಹೊಸಮನಿ ಆಯ್ಕೆಯಾಗಿದ್ದಾರೆ ಎಂದು ಶಾಲಾ ಮುಖ್ಯಶಿಕ್ಷಕಿ ವಿ.ವೈ. ಪತ್ತಾರ ತಿಳಿಸಿದ್ದಾರೆ.
ಮಂಗಳವಾರ ಶಾಲೆಯಲ್ಲಿ ಎಸ್‌ಡಿಎಂಸಿ ರಚನಾ ಸಭೆ ನಡೆಯಿತು. ಎಲ್ಲರ ಸಹಮತದೊಂದಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಜೊತೆಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ನೂತನ ಅಧ್ಯಕ್ಷ ಸುದರ್ಶನ ಬೇನೂರ ಮಾತನಾಡಿ, ಎಲ್ಲರ ಸಹಕಾರದೊಂದಿಗೆ ಶಾಲಾಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಉಪಾಧ್ಯಕ್ಷ ಪರಶುರಾಮ ಹೊಸಮನಿ ಮಾತನಾಡಿ, ಶಾಲೆಯ ಅಗತ್ಯತೆಯನ್ನು ಮನಗಂಡು, ಸಮುದಾಯದ ಸಹಭಾಗಿತ್ವದೊಂದಿಗೆ ಶಾಲೆಯ ಪ್ರಗತಿಗೆ ಶ್ರಮಿಸುತ್ತೇನೆ ಎಂದರು.
ಶಿಕ್ಷಕ ಸಂತೋಷ ಬಂಡೆ ಅವರು ಎಸ್‌ಡಿಎಂಸಿ ರಚನೆ, ಅಧಿಕಾರ ಮತ್ತು ಕರ್ತವ್ಯಗಳು, ಸರ್ಕಾರದ ಪ್ರೋತ್ಸಾಹದಾಯಕ ಕಾರ‍್ಯಕ್ರಮಗಳು, ಶಿಕ್ಷಣದ ಸಾರ್ವತ್ರೀಕರಣದಲ್ಲಿ ಪ್ರಾಥಮಿಕ ಶಿಕ್ಷಣದ ಮಹತ್ವದ ಜೊತೆಗೆ ಅನೇಕ ಶೈಕ್ಷಣಿಕ ರೂಪುರೇಷೆಗಳ ಕುರಿತು ಮಾಹಿತಿ ನೀಡಿದರು.
ಶಿಕ್ಷಕ ಎಸ್.ಆರ್. ಚಾಳೇಕರ ಮಾತನಾಡಿದರು.
ಯುವ ಮುಖಂಡರಾದ ಪರಶುರಾಮ ಹೊಸಮನಿ, ಸಂತೋಷ ಕೋಟಗೊಂಡ, ಶಾಲಾ ಮುಖ್ಯ ಶಿಕ್ಷಕಿ ವಿ.ವೈ. ಪತ್ತಾರ, ಕೆಬಿಎಸ್ ಮುಖ್ಯ ಶಿಕ್ಷಕ ಅನಿಲ ಪತಂಗಿ, ಶಿಕ್ಷಕರಾದ ಎಸ್.ಎಂ. ಪಂಚಮುಖಿ, ಎಸ್.ಡಿ. ಬಿರಾದಾರ, ಎಸ್.ಬಿ. ಕುಲಕರ್ಣಿ, ಯಲ್ಲಮ್ಮ ಸಾಲೋಟಗಿ, ಸಂತೋಷ ಬಿರಾದಾರ ಸೇರಿದಂತೆ ಎಲ್ಲ ಪಾಲಕರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

