Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ

ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜ.೧೩ರಿಂದ ಫಲ-ಪುಷ್ಪ ಪ್ರದರ್ಶನ & ತೋಟಗಾರಿಕೆ ಅಭಿಯಾನ
(ರಾಜ್ಯ ) ಜಿಲ್ಲೆ

ಜ.೧೩ರಿಂದ ಫಲ-ಪುಷ್ಪ ಪ್ರದರ್ಶನ & ತೋಟಗಾರಿಕೆ ಅಭಿಯಾನ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ, ವಿಜಯಪುರ ಜಿಲ್ಲಾ ತೋಟಗಾರಿಕೆ ಸಂಘ (ರಿ), ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ, ಇಂಡಿ ಹಾಗೂ ಜಿಲ್ಲಾ ಹಾಪ್ ಕಾಮ್ಸ್ ವಿಜಯಪುರ ಇವರ ಸಹಯೋದಲ್ಲಿ, ಜಿಲ್ಲಾ ತೋಟಗಾರಿಕೆ ಕಚೇರಿ ಆವರಣದ ಬಸವ ವನದಲ್ಲಿ ಜನವರಿ ೧೩ರಿಂದ ೧೫ರವರೆಗೆ ೨೦೨೩-೨೪ನೇ ಸಾಲಿನ ಫಲ-ಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಜನವರಿ ೧೩ರಂದು ಮಧ್ಯಾಹ್ನ ೪ ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಫಲ-ಪುಷ್ಪ ಪ್ರದರ್ಶನದ ಕಾರ್ಯಕ್ರಮದ ಉದ್ಘಾಟನೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲ ಅವರು ನೇರವೇರಿಸಲಿದ್ದಾರೆ.
ಹಣ್ಣು ಮತ್ತು ತರಕಾರಿ ಪ್ರದರ್ಶನ ಕಾರ್ಯಕ್ರಮವನ್ನು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರು, ವಿಧಾನ ಪರಿಷತ್ತು ಹಾಗೂ ಸರ್ಕಾರದ ವಿಶೇಷ ಪ್ರತಿನಿಧಿ-೨ ಆದ ಪ್ರಕಾಶ ಹುಕ್ಕೇರಿ, ಸಂಸದರಾದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ವಿ. ಪಾಟೀಲ, ಹಣಮಂತ್ ಆರ್. ನಿರಾಣಿ, ಪ್ರಕಾಶ ರಾಥೋಡ. ಸುನೀಲಗೌಡ ಬಿ. ಪಾಟೀಲ, ಪಿ.ಎಚ್.ಪೂಜಾರ, ಸಿ.ಎಸ್. ನಾಡಗೌಡ, ವಿಠ್ಠಲ ಕಟಕದೊಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ವಿಜಯಪುರ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ದಾನಮ್ಮ ಪಾಟೀಲ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ವಿಶೇಷ ಅಹ್ವಾನಿತರಾಗಿ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ. ಶಾಮ್ಲಾ ಇಕ್ಬಾಲ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ತೋಟಗಾರಿಕೆ ಇಲಾಖೆಯ ನಿರ್ದೇಶಕರಾದ ಡಿ.ಎಸ್. ರಮೇಶ್, ಜಿಲ್ಲಾಧಿಕಾರಿಗಳಾದ ಟಿ. ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ, ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಸೋನಾವಣೆೆ, ಬೆಳಗಾವಿ ವಿಭಾಗದ ತೋಟಗಾರಿಕೆ ಜಂಟಿ ನಿರ್ದೇಶಕರಾದ ಸೋಮಶೇಖರ ಹುಲ್ಲೊಳ್ಳಿ, ವಿಜಯಪುರ ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ನರೇಂದ್ರ ಬಾಬು ಎನ್.ವ್ಹಿ, ರಾಷ್ಟ್ರೀಯ ತೋಟಗಾರಿಕೆ ಮಂಡಳಿಯ ಆಡಳಿತ ಮಂಡಳಿ ನಿರ್ದೇಶಕರಾದ ಬಿ.ಎಮ್. ಕೋಕರೆ, ಪುಣೆಯ ರಾಷ್ಟ್ರೀಯ ದ್ರಾಕ್ಷಿ ಸಂಶೋಧನಾ ಕೇಂದ್ರದ ಆಡಳಿತ ಮಂಡಳಿ ನಿರ್ದೇಶಕರಾದ ಸಂಜಯ ಪಾಟೀಲ, ವಿಜಯಪುರ ಹಾಪ್‌ಕಾಮ್ಸ್ ಅಧ್ಯಕ್ಷರಾದ ಸುಭಾಷಗೌಡ ಬ. ಪಾಟೀಲ ಆಗಮಿಸಲಿದ್ದಾರೆ.
ಜ.೧೪ರಿಂದ ೧೫ರವರೆಗೆ ಬೆಳಗ್ಗೆ ೧೧ ರಿಂದ ಸಾಯಂಕಾಲ ೫ ಗಂಟೆಯವರೆಗೆ ತೋಟಗಾರಿಕೆ ಇಲಾಖೆಯ ಬಸವ ವನದಲ್ಲಿ ಶಾಲಾ ಮಕ್ಕಳಿಗೆ ತೋಟಗಾರಿಕೆ ಪರಿಕರ ವಿತರಣೆ ಹಾಗೂ ತರಬೇತಿ ಕಾರ್ಯಕ್ರಮ ಹಾಗೂ ಲಿಂಬೆ ಬೆಳೆಗಾರರ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ.
ವಿಜಯಪುರ ಜಿಲ್ಲಾಧಿಕಾರಿಗಳಾದ ಟಿ. ಭೂಬಾಲನ್ ಅವರು ಉದ್ಘಾಟಿಲಿದ್ದು, ಕಾರ್ಯಕ್ರಮದ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಕಾರ್ಯಕ್ರಮದ ಅತಿಥಿಗಳಾಗಿ ವಿಜಯಪುರ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎನ್.ಎಚ್. ನಾಗೂರ, ವಿಜಯಪುರ ಜಂಟಿ ಕೃಷಿ ನಿರ್ದೇಶಕರಾದ ರಾಜಶೇಖರ ವಿಲಿಯಮ್ಸ್, ಉಪನ್ಯಾಸಕರಾಗಿ ಹಿರಿಯ ವಿಜ್ಞಾನಿ ಹಾಗೂ ತಿಡಗುಂದಿ ತೋಟಗಾರಿಕೆ ಸಂಶೋಧನ ಮತ್ತು ವಿಸ್ತರಣ ಕೇಂದ್ರದ ಮುಖ್ಯಸ್ಥರಾದ ಡಾ. ಹಿಪ್ಪರಗಿ, ಹಿರಿಯ ವಿಜ್ಞಾನಿ ಹಾಗೂ ಹಿಟ್ನಳ್ಳಿ ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥರಾದ ಡಾ.ಶ್ರೀಶೈಲ ಎಂ. ವಸ್ತçದ ಭಾಗವಹಿಸಲಿದ್ದಾರೆ.
ಜ.೧೫ರಂದು ಸಂಜೆ ೬ ಗಂಟೆಗೆ ತೋಟಗಾರಿಕೆ ಇಲಾಖೆಯ ಬಸವ ವನದಲ್ಲಿ ಬಹುಮಾನ ವಿತರಣೆ ಸಮಾರಂಭ ನಡೆಯಲಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ವಹಿಸಲಿದ್ದಾರೆ. ಅತಿಥಿಗಳಾಗಿ ವಿಜಯಪುರ ಜಿಲ್ಲಾಧಿಕಾರಿಗಳಾದ ಟಿ. ಭೂಬಾಲನ್, ವಿಜಯಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ, ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಸೋನಾವಣೆ, ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಾದ ಬದರುದ್ದಿನ್ ಅ. ಸೌದಾಗರ, ವಿಜಯಪುರ ಜಂಟಿ ಕೃಷಿ ನಿರ್ದೇಶಕರಾದ ರಾಜಶೇಖರ ವಿಲಿಯಮ್ಸ್, ಕರ್ನಾಟಕ ಅಭಿವೃದ್ಧಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಭಾವಿದೊಡ್ಡಿ ರಾಹುಲಕುಮಾರ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕರಾದ ಇರಫಾನ ಭಾಂಗಿ, ರೇಷ್ಮೆ ಇಲಾಖೆಯ ಉಪನಿರ್ದೇಶಕರಾದ ಸಿದ್ದರಾಜು ಎಸ್, ಪಶುಸಂಗೋಪನಾ ಮತ್ತು ಪಶುವೈಧ್ಯ ಇಲಾಖೆಯ ಉಪನಿರ್ದೇಶಕರಾದ ಅಶೋಕ ಘೋಣಸಗಿ, ಹಿರಿಯ ವಿಜ್ಞಾನಿ ಹಾಗೂ ತಿಡಗುಂದಿ ತೋಟಗಾರಿಕೆ ಸಂಶೋಧನ ಮತ್ತು ವಿಸ್ತರಣ ಕೇಂದ್ರದ ಮುಖ್ಯಸ್ಥ ಡಾ.ಕುಲಪತಿ ಹಿಪ್ಪರಗಿ, ಹಿಟ್ನಳ್ಳಿ ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥರಾದ ಡಾ.ಶ್ರೀಶೈಲ ಎಂ. ವಸ್ತ್ರದ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ

ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್

ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ತೊಗರಿ ಖರೀದಿ ಕೇಂದ್ರಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ತಿಕೋಟಾ: ಸಚಿವ ಎಂ.ಬಿ.ಪಾಟೀಲ ರಿಗೆ ರೈತರಿಂದ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ಮಹಾನಗರ ಪಾಲಿಕೆಯ ಆಸ್ತಿ ತೆರಿಗೆ ಶೇ.೩ರಷ್ಟು ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.