ವಿಜಯಪುರ: ಇಂದು ನರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಕ್ಕಳ ರಕ್ಷಣಾ ವ್ಯವಸ್ಥೆಯ ಕುರಿತು ಭಾಗಿದಾರೊಂದಿಗೆ ಪ್ರಗತಿ ಪರಿಶೀಲನೆ ಅಧ್ಯಕ್ಷತೆ ವಹಿಸಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ ಕೋಸಂಬೆ ಮಾತನಾಡಿ, ಅಪ್ರಾಪ್ತರು ಗರ್ಭಿಣಿ ಕುರಿತು ಫೋಕ್ಸೋ ಅದೇಶದಂತೆ ಪೋಲಿಸರ ಗಮನಕ್ಕೆ ತಂದು ಪ್ರಕರಣ ದಾಖಲಿಸಿಕೊಳ್ಳುವತ್ತ ಆರೋಗ್ಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಸಶಕ್ತ ಸಧೃಢ ಉತ್ತಮ ಸಮಾಜದ ಬೆಳವಣಿಗೆ ಗರ್ಭಿಣಿಯರ ಹಾಗೂ ತಾಯಂದಿರುಗಳು ಮಗುವಿನ ಉತ್ತಮ ಬೆಳೆವಣಿಗೆಗಾಗಿ ಆರೋಗ್ಯ ಕಡೆ ಹೆಚ್ಚು ನಿಗಾ ವಹಿಸಬೇಕು. ಸಮತೋಲನ ಹಾಗೂ ಪೌಷ್ಟಿಕ ಆಹಾರ ಅತ್ಯವಶ್ಯವಾಗಿದ್ದು ತಪ್ಪದೆ ಉತ್ತಮ ಶಕ್ತಿಭರಿತ ಆಹಾರ ಒದಗಿಸಬೇಕು ಎಂದು ಅವರು ಹೇಳಿದರು.
ರಕ್ತ ಹೀನತೆ ಮಕ್ಕಳಿಗಾಗಿ ಅನಿಯಾ ಮುಕ್ತ ಕರ್ನಾಟಕ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಪ್ರಥಮ ಹಂತದಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ನಂತರ ಹೈಸ್ಕೂಲ ಹಾಗೂ ಪ್ರಾಥಮಿಕ ಹಂತಗಳಲ್ಲಿ ಮಕ್ಕಳಿಗೆ ಆರೋಗ್ಯ ತಪಾಸಣೆ ಮಾಡಿ ಅವರಿಗೆ ಅಲ್ಲಿಯೆ ಮಕ್ಕಳಿಗೆ ಅಗತ್ಯಕ್ಕನುಗುಣವಾಗಿ ಔಷಧಿಗಳನ್ನು ವಿತರಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಒಟ್ಟು ೧೬೨ ಸ್ಕ್ಯಾನಿಂಗ ಸೆಂಟರ್‌ಗಳಲ್ಲಿ ಮಶಿನ್‌ಗಳು ಕಾರ್ಯನಿರ್ವಹಿಸುತ್ತಿದ್ದು ಪ್ರತಿ ತಿಂಗಳು ಸಮಿತಿಯವ್ರು ೫೦ರಿಂದ ೫೨ ಸೆಂಟರ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದ್ದು, ಆ ಪೈಕಿ ೩೪ ಸೆಂಟರ್‌ಗಳಿಗೆ ನೋಟಿಸನ್ನು ನೀಡಲಾಗಿದೆ. ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಭೆಗೆ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಮೂರ್ತಿ ಸಂತೋಷ ಕುಂದರ ಮಾತನಾಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮಕ್ಕಳ ಕಲ್ಯಾಣ ಸಮೀತಿ ಅಧ್ಯಕ್ಷರಾದ ಶ್ರೀಧರ ಕುಲಕರ್ಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ ಚವ್ಹಾಣ, ತಾಲೂಕು ಕಾರ್ಯನಿರ್ವಾಹಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಸವರಾಜ ಜೋಗಳೂರ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

