ವಿಜಯಪುರ: ಹಲವು ಜಿಲ್ಲೆಗಳಲ್ಲಿ ಕೋವಿಡ್-೧೯ ಉಪತಳಿಯ ಜೆಎನ್೧ ಪ್ರಕರಣ ವರದಿಯಾದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಕೋವಿಡ್-೧೯ ಮೂರನೇ ಡೋಸ್ ಪಡೆಯದೆ ಉಳಿದಿರುವ ೬೦ ವರ್ಷ ಮೇಲ್ಪಟ್ಟವರು, ಮಧುಮೇಹ, ಅಧೀಕ ರಕ್ತ ಒತ್ತಡ ಇತ್ಯಾದಿ ಕಾಯಿಲೆಯುಳ್ಳ, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು ಬೂಸ್ಟರ್ ಡೋಸ್ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಕೋವಿಡ್-೧೯ ಲಸಿಕಾರಣವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಈ ಹಿಂದೆ ಕೋವಿಡ್-೧೯ ಲಸಿಕೆಯನ್ನು ಪಡೆಯದೆ ಇರುವವರು ಹಾಗೂ ಆರೋಗ್ಯ ಕಾರ್ಯಕರ್ತೆಯರು ಕೋವಿಡ್-೧೯ ಸೋಂಕಿಗೆ ತುತ್ತಾಗುವ ಹೆಚ್ಚಿನ ಅಪಾಯದಂಚಿನಲ್ಲಿರುತ್ತಾರೆ. ವಿಜಯಪುರ ಜಿಲ್ಲೆಯಲ್ಲಿ ಕೋವಿಡ್ ಬೂಸ್ಟರ್ ೩ನೇ ಡೋಸ್ ಲಸಿಕೆಯನ್ನು ಮುನ್ನೆಚ್ಚರಿಕೆ ಡೋಸ್ ನೀಡುವ ಅಭಿಯಾನ ಪ್ರಾರಂಭವಾಗಿದ್ದು, ಕೋವಿಶೀಲ್ಡ್ ಅಥವಾ ಕೋವಾಕ್ಸಿನ್ ಲಸಿಕೆಯ ೨ನೇ ಡೋಸ್ ಪಡೆದು ೬ ತಿಂಗಳುಗಳು ಅಥವಾ ೨೬ ವಾರಗಳನ್ನು ಪೂರೈಸಿದ ೧೮ ವರ್ಷ ಮೇಲ್ಪಟ್ಟು ಮುನ್ನೆಚ್ಚರಿಕೆ (ಬೂಸ್ಟರ್) ಡೋಸ್ ಲಸಿಕಾಕರಣಕ್ಕೆ ಹೋಗಿ ಲಸಿಕೆ ಹಾಕಿಸಿ ಕೊಳ್ಳಬೇಕು. ಈಗಾಗಲೇ ಕೋವಿಡ್ ಬೂಸ್ಟರ್ (೩ನೇ ಡೋಸ್) ಲಸಿಕೆ ಪಡೆದವರು ಮತ್ತೆ ಲಸಿಕೆ ಪಡೆಯುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಜಿಲ್ಲಾ ಆಸ್ಪತ್ರೆ, ತಾಲೂಕಾ ಸಾರ್ವಜನಿಕ ಆಸ್ಪತ್ರೆ ಬ.ಬಾಗೇವಾಡಿ, ಇಂಡಿ, ಮುದ್ದೇಬಿಹಾಳ, ಸಿಂದಗಿ ಹಾಗೂ ವಿಜಯಪುರ ನಗರ ಆರೋಗ್ಯ ಕೇಂದ್ರಗಳಾದ ಎ.ಪಿ.ಎಮ್.ಸಿ, ಶಾಂತಿನಗರ ಮತ್ತು ತಾಜಬಾವಡಿ ಆಸ್ಪತ್ರೆಗಳಲ್ಲಿ ಕೋವಿಡ್ ಬೂಸ್ಟರ್ ೩ನೇ ಡೋಸ್ ಲಸಿಕೆ ಉಚಿತವಾಗಿ ಲಭ್ಯವಿರಲಿದ್ದು, ನಿಮ್ಮ ಹತ್ತಿರ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಲಸಿಕೆಯನ್ನು ಉಚಿತವಾಗಿ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
