ಬಸವನಬಾಗೇವಾಡಿ: ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಣಕಾಸು ಕ್ಷೇತ್ರದಲ್ಲಿ ಉದಯೋನ್ಮುಖ ಪ್ರವೃತ್ತಿಗಳು ಮತ್ತು ಅವಕಾಶಗಳು ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮಾಯ್ ಲಾಜಿಕ್ ಕಂಪನಿಯ ಸಿಇಓ ವಿನೋದಚಂದ್ರನ್ ಅವರು ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ದುಡಿಮೆಗೆ ಸಂಬಂಧಿಸಿದ ಕೌಶಲ್ಯಗಳನ್ನು ರೂಢಿಸಿಕೊಂಡು ಹೊರಗೆ ಬಂದಾಗ ಮಾತ್ರ ಶ್ರೇಷ್ಠ ಸಾಧನೆ ಮಾಡಲು ಸಾಧ್ಯ. ವಿದ್ಯಾರ್ಥಿಗಳು ಅಂತರ್ಜಾಲದ ಮೂಲಕ ಉದ್ಯೋಗಾಧಾರಿತ ತರಬೇತಿ, ಮತ್ತು ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಕಂಪನಿಗಳಲ್ಲಿ ಅಲ್ಪಾವಧಿಯಲ್ಲಿಯೇ ಉನ್ನತಮಟ್ಟಕ್ಕೇರುವ ಎಲ್ಲ ಮಾರ್ಗಗಳನ್ನು ಅರಿತುಕೊಳ್ಳಬೇಕು. ಜಗತ್ತು ಇಂದು ಎಲ್ಪಿಜಿಗೆ ಒಳಪಟ್ಟಿರುವುದರಿಂದಾಗಿ ವಾಣಿಜ್ಯ ವಿಭಾಗದಲ್ಲಿ ಸಾಕಷ್ಟು ಅವಕಾಶಗಳು ಇರುವುದರಿಂದಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದ ಅವರು, ಬಿಕಾಂ ಪದವಿ ನಂತರ ಇರುವ ವಿಪುಲ ಅವಕಾಶಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಮಾತನಾಡಿದರು.
ಕಾರ್ಯಾಗಾರದಲ್ಲಿ ಐಕ್ಯೂಎಸಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ದಿಲೀಪಕುಮಾರ ಕೆ., ಅರ್ಥಶಾಸ್ತ್ರವಿಭಾಗದ ಮುಖ್ಯಸ್ಥ ಡಾ.ರವೀಂದ್ರಗೌಡ ಕೆ., ಎನ್ಎಸ್ಎಸ್ ಹಾಗೂ ಸಮಾಜಶಾಸ್ತ್ರವಿಭಾಗದ ಮುಖ್ಯಸ್ಥ ಡಾ.ವೈ.ಬಿ.ನಾಯಕ, ವಿದ್ಯಾರ್ಥಿ ಒಕ್ಕೂಟ ಮತ್ತು ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಡಿ.ಎಸ್.ಲಗಳಿ ಇತರರು ಇದ್ದರು. ನ್ಯಾಕ್ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ.ಸಿ.ಪಿ.ಧಡೇಕರ ಸ್ವಾಗತಿಸಿದರು. ಪ್ರೊ.ಎಂ.ಕೆ.ಯಾದವ ನಿರೂಪಿಸಿದರು. ಪ್ರೊ.ಜೆ.ಎಸ್.ಡಾವಣಗೇರಿ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

