Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಾ ಸಿಎಂ ಶಿಂಧೆ ಬಣವೇ ನಿಜ ಶಿವಸೇನೆ!
(ರಾಜ್ಯ ) ಜಿಲ್ಲೆ

ಮಹಾ ಸಿಎಂ ಶಿಂಧೆ ಬಣವೇ ನಿಜ ಶಿವಸೇನೆ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಹಾರಾಷ್ಟ್ರ ಸ್ಪೀಕರ್ ತೀರ್ಪು | ಶಾಸಕರ ಅನರ್ಹತೆ ತಿರಸ್ಕಾರ | ಉದ್ಧವ್ ಠಾಕ್ರೆಗೆ ಮುಖಭಂಗ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಬುಧವಾರ ತೀರ್ಪು ನೀಡಿದ್ದು, ಮಾಜಿ ಸಿಎಂ ಮತ್ತು ಯುಬಿಟಿ ಬಣದ ನಾಯಕ ಉದ್ಧವ್ ಠಾಕ್ರೆ ಅವರಿಗೆ ಏಕನಾಥ್ ಶಿಂಧೆ ಅವರನ್ನು ತೆಗೆದುಹಾಕುವ ಅಧಿಕಾರ ಇಲ್ಲ ಎಂದು ಹೇಳಿದ್ದಾರೆ.
2022 ರಲ್ಲಿ ಶಿವಸೇನಾದಲ್ಲಿ ಒಡಕುವುಂಟಾಗಿ ಎರಡು ಬಣಗಳಾಗಿ ವಿಭಜನೆ ಆಗಿ 18 ತಿಂಗಳ ನಂತರ ಇಂದು ಸಂಜೆ ಸ್ಪೀಕರ್ ರಾಹುಲ್ ಅವರು ಬಹು ನಿರೀಕ್ಷಿತ ತೀರ್ಪನ್ನು ಪ್ರಕಟಿಸಿದ್ದು, ಶಿಂಧೆ ಅವರ ಬಣವೇ ನಿಜವಾದ ಶಿವಸೇನೆ ಎಂದು ಹೇಳಿದ್ದಾರೆ. ಅಲ್ಲದೆ ಸಿಎಂ ಶಿಂಧೆ ಮತ್ತು ಅವರ ಬೆಂಬಲಿಗ ಶಾಸಕರನ್ನು ಅನರ್ಹಗೊಳಿಸಬೇಕೆಂಬ ಠಾಕ್ರೆ ಬಣದ ಬೇಡಿಕೆಯನ್ನು ತಿರಸ್ಕರಿಸಲಾಗಿದೆ.
ಸಿಎಂ ಏಕನಾಥ್ ಶಿಂಧೆ ಸೇರಿದಂತೆ 16 ಶಿವಸೇನೆ ಶಾಸಕರ ಅನರ್ಹತೆಯ ವಿರುದ್ಧದ ಅರ್ಜಿಗಳನ್ನು ವಜಾಗೊಳಿಸಿರುವ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು, ನಾಯಕತ್ವದ ರಚನೆಯನ್ನು ನಿರ್ಧರಿಸಲು ಪಕ್ಷದ 2018 ರ ಸಂವಿಧಾನವನ್ನು ಉಲ್ಲೇಖಿಸಿದ್ದಾರೆ.
ಚುನಾವಣಾ ಆಯೋಗ ಒದಗಿಸಿದ ಶಿವಸೇನಾ ಸಂವಿಧಾನವು ನಿಜವಾದ ಸಂವಿಧಾನವಾಗಿದೆ, ಇದನ್ನು ಎಸ್ಎಸ್ ಸಂವಿಧಾನ ಎಂದು ಕರೆಯಲಾಗುತ್ತದೆ ಎಂದು ಸ್ಪೀಕರ್ ಹೇಳಿದ್ದು ಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದಿದ್ದಾರೆ.
ಶಿವಸೇನಾದ ಎರಡು ಬಣಗಳು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಸಂವಿಧಾನದ ಬಗ್ಗೆ ಯಾವುದೇ ಒಮ್ಮತವಿಲ್ಲ. ನಾಯಕತ್ವ ರಚನೆಯ ಬಗ್ಗೆ ಎರಡು ಪಕ್ಷಗಳು ವಿಭಿನ್ನ ದೃಷ್ಟಿಕೋನಗಳನ್ನು ಹೊಂದಿವೆ. ಏಕೈಕ ಅಂಶವೆಂದರೆ ಶಾಸಕಾಂಗ ಪಕ್ಷದಲ್ಲಿ ಬಹುಮತ. ವಿವಾದದ ಮೊದಲು ಅಸ್ತಿತ್ವದಲ್ಲಿದ್ದ ನಾಯಕತ್ವ ರಚನೆಯನ್ನು ಗಣನೆಗೆ ತೆಗೆದುಕೊಳ್ಳಬೇಕಾದ ಸಂಬಂಧಿತ ಸಂವಿಧಾನವನ್ನು ನಾನು ನಿರ್ಧರಿಸಬೇಕಾಗಿದೆ ಎಂದು ಸ್ಪೀಕರ್ ರಾಹುಲ್ ನಾರ್ವೇಕರ್ ಹೇಳಿದ್ದಾರೆ.
ಉದ್ಧವ್ ಠಾಕ್ರೆ ಏಕನಾಥ್ ಶಿಂಧೆಯನ್ನು ನಾಯಕ ಸ್ಥಾನದಿಂದ ತೆಗೆದುಹಾಕುವ ಹಕ್ಕು ಹೊಂದಿಲ್ಲ. ಶಿವಸೇನೆಯ ಯಾವುದೇ ಸದಸ್ಯರನ್ನು ತೆಗೆದುಹಾಕುವ ಹಕ್ಕು ಉದ್ಧವ್‌ಗೆ ಇಲ್ಲ. ಶಿಂಧೆ ಅವರನ್ನು ಪದಚ್ಯುತಗೊಳಿಸಲು ಉದ್ಧವ್‌ ಅವರಿಗೆ ಬಹುಮತ ಬೇಕು, ಅದು ಅವರ ಬಳಿ ಇಲ್ಲ. ಒಬ್ಬ ವ್ಯಕ್ತಿಯನ್ನು ಇಷ್ಟಪಡುವುದಿಲ್ಲ ಎಂಬ ಕಾರಣಕ್ಕಾಗಿ ಅವರು ಯಾರನ್ನಾದರೂ ತೆಗೆದುಹಾಕಲು ಸಾಧ್ಯವಿಲ್ಲ ಎಂದು ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಸ್ಪಷ್ಟಪಡಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.