Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಗುವೇ ಜೀವನದ ಜೀವಾಳ :ಡಾ.ಮಾಗಣಗೇರಿ
(ರಾಜ್ಯ ) ಜಿಲ್ಲೆ

ನಗುವೇ ಜೀವನದ ಜೀವಾಳ :ಡಾ.ಮಾಗಣಗೇರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ಕನ್ನಡ ಸಾಹಿತ್ಯ ಲೋಕದ ‘ಹಾಸ್ಯಬ್ರಹ್ಮ’ ಎಂದು ಚಿರಪರಿಚಿತರಾದ ಡಾ. ಎಂ. ಎಸ್. ಸುಂಕಾಪುರ ಅವರ ಸಾಹಿತ್ಯ ಶೃಂಗಾರ ರಸದ ಜೊತೆಗೆ ಹಾಸ್ಯ ರಸ ಸೇರಿಸಿ ನವರಸ ಜೀವಂತಿಕೆ ಹಾಗೂ ಜೀವನಾನುಭವದ ಸಾಹಿತ್ಯವಾಗಿದೆ. ನಗುವೇ ಜೀವನದ ಜೀವಾಳ. ನಗೆ ಇಲ್ಲದ ಮನೆ ದೇವರಿಲ್ಲದ ಗುಡಿಯಂತೆ ಎಂದರಿತ ಪ್ರತಿಯೊಬ್ಬರೂ ಹಾಸ್ಯವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾದರೆ ಕಲಹಗಳಿಗೆ ಅವಕಾಶವೇ ಇರುವುದಿಲ್ಲ ಎಂದು ಶ್ರೀ ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಡಾ.ಎಂ.ಎಸ್.ಮಾಗಣಗೇರಿ ಅಭಿಪ್ರಾಯಪಟ್ಟರು.
ಡಾ.ಎಂ.ಎಸ್.ಸುಂಕಾಪುರ ಅವರ ೧೦೩ನೇ ಜನ್ಮ ದಿನದ ಅಂಗವಾಗಿ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುಂಕಾಪುರರು ನಗೆ-ಹೊಗೆ, ಗಪ್-ಚಿಪ್, ತಲೆಹರಟೆಗಳು, ನಗೆಗಾರ ನಯಸೇನ, ಜೀವನದಲ್ಲಿ ಹಾಸ್ಯ ಮೊದಲಾದ ಹಾಸ್ಯ ಕೃತಿಗಳನ್ನು ರಚಿಸುವುದರ ಜೊತೆಗೆ ‘ಕನ್ನಡ ಸಾಹಿತ್ಯದಲ್ಲಿ ಹಾಸ್ಯ’ ಎಂಬ ಸಂಶೋಧನಾ ಮಹಾ ಪ್ರಬಂಧ ಮಂಡಿಸಿ ಡಾಕ್ಟರೇಟ್ ಪದವಿ ಪಡೆದ ಮೊದಲಿಗರು ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಧ್ಯಾಪಕ ಎಂ.ಎ.ಜನವಾಡ, ಸುಂಕಾಪುರ ಅವರ ಮನೆತನವೆ ಜನಪದಗಳ ತವರಾಗಿತ್ತು. ಹೀಗಾಗಿ ಇವರಿಗೆ ಜನಪದ ಕಲೆಗಳ ಬಗ್ಗೆ ವಿಶೇಷವಾದ ಆಕರ್ಷಣೆ ಮೂಡಿತು. ಸುಗ್ಗಿ ಕುಣಿತ, ಸೋಬಾನ ಪದ, ಜಾನಪದ ಕಥೆ ಹೇಳುವ ಕಲೆ ಇವರಿಗೆ ಕರಗತವಾಗಿತ್ತು ಎಂದರು.
ಐಕ್ಯೂಎಸಿ ಮುಖ್ಯಸ್ಥ ಡಾ.ಎಸ್.ಎಸ್.ದೇಸಾಯಿ ಮಾತನಾಡಿ, ಸುಂಕಾಪುರ ಅವರಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಸಾಹಿತ್ಯ ರಚನೆಯ ಗೀಳು ಹತ್ತಿತ್ತು. ಹರಟೆ, ನಾಟಕಗಳ ರಚನೆಯ ಹವ್ಯಾಸ ಮೂಡಿತ್ತು. ಅವರು ನಾಟಕಕಾರರು ಮಾತ್ರವಲ್ಲದೆ ಶ್ರೇಷ್ಠನಟರೂ ಆಗಿದ್ದರು ಎಂಬುವುದನ್ನು ನೆನಪಿಸಿಕೊಂಡರು.
ಅಧ್ಯಕ್ಷತೆ ವಹಿಸಿದ ಪ್ರಭಾರಿ ಪ್ರಾಚಾರ್ಯ ಎಂ.ಕೆ.ಬಿರಾದಾರ ಮಾತನಾಡಿ, ಸುಂಕಾಪುರ ಅವರು ಪ್ರಭುಲಿಂಗಲೀಲೆ, ಶಬರ ಶಂಕರ ವಿಲಾಸ, ಸೋಮನಾಥ ಚರಿತೆ, ರಾಜಶೇಖರ ವಿಳಾಸ ಮುಂತಾದ ಹನ್ನೊಂದು ಕೃತಿಗಳನ್ನು ಸಂಪಾದಿಸಿದರು. ಚೌಪದನಗಳು, ಹೋಳಿ ಹಾಡು ಮೊದಲಾದ ಜಾನಪದ ಕೃತಿಗಳನ್ನು, ಶ್ರೀಕೃಷ್ಣ ಪಾರಿಜಾತ, ಅಲ್ಲಮಪ್ರಭು ಸಣ್ಣಾಟ ಮೊದಲಾದ ಯಕ್ಷಗಾನ ಬಯಲಾಟ ಕೃತಿಗಳನ್ನು ನೀಡಿ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಡಾ.ಆರ್.ಎಸ್.ಮಾವಿನಮರ ಹಾಗೂ ಪ್ರಾಧ್ಯಾಪಕ ವೃಂದ, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರೀತಿ ಬಿರಾದಾರ ಪ್ರಾರ್ಥಿಸಿದರು. ಪ್ರೊ. ಎಸ್. ಎಫ್. ಬಿರಾದಾರ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.