Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ

ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಾಲೂಕಿನಾದ್ಯಂತ ಎಳ್ಳ ಅಮವಾಸ್ಯೆ ಆಚರಣೆ
(ರಾಜ್ಯ ) ಜಿಲ್ಲೆ

ತಾಲೂಕಿನಾದ್ಯಂತ ಎಳ್ಳ ಅಮವಾಸ್ಯೆ ಆಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗುರುವಾರ ಎಳ್ಳ ಅಮವಾಸ್ಯೆಯಂಗವಾಗಿ ರೈತ ಬಾಂಧವರು ತಮ್ಮ ತಮ್ಮ ಹೊಲಗಳಲ್ಲಿ ಬೆಳೆದು ನಿಂತ ಬೆಳೆಗೆ ಮತ್ತು ಭೂತಾಯಿಗೆ ಪೂಜೆ ಸಲ್ಲಿಸಿ ಸಂಪ್ರದಾಯದಂತೆ ಚೆರಗ ಚೆಲ್ಲಿ ಸಂಭ್ರಮಿಸಿದರು.
ಈ ಸಲ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗದೇ ಇರುವದರಿಂದಾಗಿ ಬರಮಧ್ಯೆಯಲ್ಲಿಯೂ ಇರುವ ಅಲ್ಪಸ್ವಲ್ಪ ಬೆಳೆಯಲ್ಲಿ ಸಂಪ್ರದಾಯದ ಎಳ್ಳ ಅಮವಾಸ್ಯೆಯನ್ನು ರೈತ ಬಾಂಧವರು ಆಚರಿಸಿದರು.
ಎತ್ತಿನ ಬಂಡಿಗಳಲ್ಲಿ ಹೋಗುವದು ಅಷ್ಟಾಗಿ ಕಂಡುಬರಲಿಲ್ಲ. ಕೆಲ ರೈತ ಬಾಂಧವರು ತಮ್ಮ ಹೊಲಗಳಿಗೆ ತಮ್ಮ ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ತೆರಳಿದರೆ, ಅಲ್ಪಸ್ವಲ್ಪ ಬೆಳೆ ಇದ್ದ ರೈತ ಬಾಂಧವರು ಮನೆಯವರೊಂದಿಗೆ ಹೋಗಿ ಚೆರಗ ಚೆಲ್ಲುವ ಹಬ್ಬ ಆಚರಿಸಿದರು. ಬೆಳಗ್ಗೆಯಿಂದಲೇ ಮನೆಗಳಲ್ಲಿ ಮಹಿಳೆಯರು ಎಳ್ಳ ಅಮವಾಸ್ಯೆ ಹಬ್ಬಕ್ಕಾಗಿ ಸಜ್ಜಿ ಕಡಬು, ಹೂರಣದ ಕಡಬು, ಹೂರಣದ ಹೋಳಗಿ, ಶೇಂಗಾದ ಹೋಳಗಿ, ಸಜ್ಜಿ ರೊಟ್ಟಿ, ಚಪಾತಿ, ವಿವಿಧ ತರಹದ ಕಾಳು, ತರಕಾರಿ ಪಲ್ಯೆ ಸೇರಿದಂತೆ ವಿವಿಧ ಖಾದ್ಯಗಳನ್ನು ತಯಾರಿಸಿ ನಂತರ ಊರ ದೇವರಿಗೆ ನೈವೇದ್ಯ ಹಿಡಿದು ಬುತ್ತಿ ಕಟ್ಟಿಕೊಂಡು ತಮ್ಮ ತಮ್ಮ ಹೊಲಗಳಿಗೆ ಎತ್ತಿನ ಬಂಡಿ, ಟ್ರ್ಯಾಕ್ಟರ್, ಟಂಟಂ ಸೇರಿದಂತೆ ಇತರೇ ವಾಹನಗಳ ಮೂಲಕ ಕುಟುಂಬ ಸದಸ್ಯರು ಹಾಗೂ ತಮ್ಮ ಬಂಧು ಬಳಗದೊಂದಿಗೆ ಹೊಲಗಳಿಗೆ ತೆರಳಿದರು.
ಹೊಲದಲ್ಲಿ ಬೆಳೆದು ನಿಂತ ಬೆಳೆಗೆ , ಹೊಲದ ಬನ್ನಿ ಮರದ ಕೆಳಗಿರುವ ಲಕ್ಷ್ಮೀದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮನೆಯಿಂದ ತಂದ ನೈವೇದ್ಯವನ್ನು ಎಡೆ ಹಿಡಿದು ನಂತರ ಭೂತಾಯಿಗೆ ಧನ್ಯತಾ ಭಾವದೊಂದಿಗೆ ಸಾಮೂಹಿಕ ಚೆರಗ ಚೆಲ್ಲಿದರು. ನಂತರ ಸಾಮೂಹಿಕ ಭೋಜನದಲ್ಲಿ ಎಲ್ಲರೂ ಎಳ್ಳ ಅಮವಾಸ್ಯೆಯ ಊಟದ ಸವಿಯನ್ನು ಸವಿದರು.
ಜೋಳದ ಬೆಳೆ ಇದ್ದರೆ ಎಳ್ಳ ಅಮವಾಸ್ಯೆಯ ಸಂಭ್ರಮವೇ ಬೇರೆ ಎಂದು ರೈತರೊಬ್ಬರು ಹೇಳಿದರು.ಊಟದ ನಂತರ ಮಕ್ಕಳು ವಿವಿಧ ರೀತಿಯ ಆಟಗಳನ್ನು ಆಡುವದರೊಂದಿಗೆ ಸಂತಸಗೊಂಡರೆ ಹಿರಿಯರು ಕುಶಲೋಪರಿಯನ್ನು ಹಂಚಿಕೊಂಡರು. ಸಂಜೆ ಸೂರ್ಯಾಸ್ತ ಸಮಯ ಹತ್ತಿರವಾಗುತ್ತಿದ್ದಂತೆ ಮತ್ತೊಮ್ಮೆ ಭೂತಾಯಿಗೆ ನಮಸ್ಕರಿಸಿ ಮುಂಬರುವ ವರ್ಷದಲ್ಲಿ ಉತ್ತಮ ಮಳೆ-ಬೆಳೆ ದೇವರು ಕೊಡಲಿ ಎಂದು ಪ್ರಾರ್ಥಿಸಿ ತಮ್ಮ ತಮ್ಮ ಮನೆ ಕಡೆಗೆ ತೆರಳಿದ ದೃಶ್ಯ ಕಂಡು ಬಂದಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ

ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್

ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ತೊಗರಿ ಖರೀದಿ ಕೇಂದ್ರಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ತಿಕೋಟಾ: ಸಚಿವ ಎಂ.ಬಿ.ಪಾಟೀಲ ರಿಗೆ ರೈತರಿಂದ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ಮಹಾನಗರ ಪಾಲಿಕೆಯ ಆಸ್ತಿ ತೆರಿಗೆ ಶೇ.೩ರಷ್ಟು ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.