Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೪.೧೫ ಲಕ್ಷ ಮೌಲ್ಯದ ಬೈಕ್‌ಗಳ ಕಳವು :ಮೂವರ ಬಂಧನ
(ರಾಜ್ಯ ) ಜಿಲ್ಲೆ

೪.೧೫ ಲಕ್ಷ ಮೌಲ್ಯದ ಬೈಕ್‌ಗಳ ಕಳವು :ಮೂವರ ಬಂಧನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಪಟ್ಟಣ ಸೇರಿದಂತೆ ವಿವಿಧೆಡೆ ಸುಮಾರು ೪.೧೫ ಲಕ್ಷ ಮೌಲ್ಯದ ಬೈಕ್‌ಗಳನ್ನು ಕದ್ದ ಹಾಗೂ ಮಲ್ಲಯ್ಯ ದೇವಸ್ಥಾನ ದೋಚಲು ಯತ್ನಿಸಿದ ಮೂವರು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಪಟ್ಟಣದಲ್ಲಿ ಗುರುವಾರ ನಸುಕಿನ ಜಾವ ಮಡಿವಾಳ ಮಾಚಿದೇವರ ದೇವಸ್ಥಾನದ ಮುಂದೆ ಅನುಮಾನಸ್ಪದವಾಗಿ ಅಲೆಯುತ್ತಿದ್ದ ಮೂವರು ವ್ಯಕ್ತಿಗಳನ್ನು ಸ್ಥಳೀಯ ಪೊಲೀಸ್ ಸಿಬ್ಬಂದಿ ಠಾಣೆಗೆ ಕರೆ ತಂದು ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳು ತಾವು ಪಟ್ಟಣ ಸೇರಿದಂತೆ ಯಾದಗಿರಿ ಜಿಲ್ಲೆಯ ವಿವಿಧೆಡೆ ಕದ್ದ ೧೦ ಬೈಕ್ ಹಾಗೂ ಕಳೆದ ಕೆಲವು ದಿನಗಳ ಹಿಂದೆ ಮಲ್ಲಯ್ಯ ದೇವಸ್ಥಾನದಲ್ಲಿ ಕಾಣಿಕೆ ಹುಂಡಿಯನ್ನು ಕಳ್ಳತನ ಮಾಡಲು ಪ್ರಯತ್ನಿಸಿದ್ದನ್ನು ಒಪ್ಪಿಕೊಂಡಿದ್ದಾರೆ.
ಆರೋಪಿಗಳು ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗಳ ಅನೀಲಕುಮಾರ ಬಾಗೋಡಿ, ವೆಂಕಟೇಶ ನೀಡಗಿ, ಶರಣಯ್ಯಸ್ವಾಮಿ ಗೊಬ್ಬಿ ಎಂದು ತಿಳಿದು ಬಂದಿದೆ.
ಕಳೆದ ಕೆಲವು ದಿನಗಳಿಂದ ಪಟ್ಟಣದಲ್ಲಿ ಹೆಚ್ಚುತ್ತಿರುವ ಕಳವು ಪ್ರಕರಣಗಳು ಪೊಲೀಸ್ ಇಲಾಖೆಗೆ ಸವಾಲಾಗಿದ್ದವು. ಇವುಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ ಸೋನಾವಣೆ, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಎಮ್.ಮಾರಿಹಾಳ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮನಗೌಡ ಹಟ್ಟಿ ಇವರ ಮಾರ್ಗದರ್ಶನದಲ್ಲಿ ವಿಜಯಪುರ ಗ್ರಾಮಾಂತರ ಉಪವಿಭಾಗದ ಡಿಎಸ್‌ಪಿ ಗಿರಿಮಲ್ಲ ತಳಕಟ್ಟಿ, ಸಿಪಿಐ ಆನಂದರಾವ್ ಎಸ್.ಎನ್, ಪಿಎಸೈಗಳಾದ ಬಸವರಾಜ ತಿಪ್ಪಾರಡ್ಡಿ, ಎಸ್.ಬಿ.ನಡುವಿನಕೇರಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ಕಾರ್ಯಾಚರಣೆ ಆರಂಭಿಸಿದ್ದರು. ಕೊನೆಗೆ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಾರ್ಯಾಚರಣೆಯ ತನಿಖಾ ತಂಡದಲ್ಲಿ ಸಿಬ್ಬಂದಿ ಗುರು ಸಿಂಗೆ, ಬಿ.ಎಸ್.ಮೇಡೆದಾರ, ಎಸ್.ಎಸ್. ಸಿನ್ನೂರ, ಎಮ್.ಎಸ್.ಮುಜಾವರ, ಆರ್.ಬಿ.ಕುಂಬಾರ, ಕೆ.ವೈ.ಕರಿಕಟ್ಟಿ, ವಿ.ಎಚ್.ಶಾಂತಗಿರಿ, ತೌಸೀಫ್ ಎಂ.ಪಿ, ಜಾವೀದ್ ಎ.ಎನ್, ವೈ.ಬಿ.ಬಜಂತ್ರಿ, ವಿ.ಎಲ್.ಕೆಳಗಿನಮನಿ, ಎಸ್.ಎಸ್. ಬಿರಾದಾರ, ಸಂಜೀವ ಹೊಸಮನಿ ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.