Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಡಿಸಿ ಸೂಚನೆ
(ರಾಜ್ಯ ) ಜಿಲ್ಲೆ

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಡಿಸಿ ಸೂಚನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಆಚರಣೆಯ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಯಾವುದೇ ಗೊಂದಲ ಮಾಡಿಕೊಳ್ಳದೇ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಲು ಸೂಚಿಸಿದರು.
ಅಧಿಕಾರಿಗಳು ತಮಗೆ ವಹಿಸಿದ ಎಲ್ಲ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿ, ವಹಿಸಿದ ಜವಾಬ್ದಾರಿ ಕೈಗೊಂಡು ಯಶಸ್ವಿಗೊಳಿಸಬೇಕು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ,ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಕ್ರಮವಹಿಸಬೇಕು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಗೆ ಉಪ ನಿರ್ದೇಶಕರು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವೇದಿಕೆ ಸಿದ್ಧತೆ,ಆಕರ್ಷಕ ಪಥಸಂಚಲನ, ಸನ್ಮಾನ,ಅಲ್ಫೋಪಹಾರ ವ್ಯವಸ್ಥೆ ಅಚ್ಚುಕಟ್ಟು ವ್ಯವಸ್ಥೆಗೆ ಕ್ರಮಕೈಗೊಳ್ಳಬೇಕು. ಭದ್ರತಾ ವ್ಯವಸ್ಥೆ,ಕುಡಿಯುವ ನೀರು,ಸ್ವಚ್ಛತೆ, ದೀಪಾಲಂಕಾರ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಕಾರ್ಯಕ್ರಮಕ್ಕೆ ನಿಗದಿತ ಸಮಯದಲ್ಲಿ ಎಲ್ಲ ಅಧಿಕಾರಿಗಳು ಹಾಜರಿರಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಅಂದು ಸಂಜೆ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿ, ಪ್ಲಾಸ್ಟಿಕ್ ಧ್ವಜ ಮಾರಾಟವಾಗದಂತೆ ನೋಡಿಕೊಳ್ಳಬೇಕು. ಸಂಬAಧಿಸಿದ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ತಿಳಿಸಿದ ಅವರು, ಗಣರಾಜ್ಯೋತ್ಸವದ ಸಂದೇಶ ಸಿದ್ದತೆಗೆ ಎಲ್ಲಾ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ನೀಡುವಂತೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಋಷಿಕೇಶ ಸೋನಾವಣೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ,ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ, ಮಹಾನಗರ ಪಾಲಿಕೆ ಆಯುಕ್ತರಾದ ಬದ್ರುದ್ದಿನ ಸೌದಾಗರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ,ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಪುಂಡಲಿಕ ಮಾನವರ, ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಪತ್ರಾಧಿಕಾರಿ ರಾಮಣ್ಣ ಅಥಣಿ,ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ,ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ,ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ್ ವಾಲೀಕಾರ್, ಅಡಿವೆಪ್ಪ ಸಾಲಗಲ್,ಭೀಮರಾಯ ಜಿಗಜಿಣಗಿ, ಅಭಿಷೇಕ ಚಕ್ರವರ್ತಿ,ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.