ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಜನವರಿ ೧೫ ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿದಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ರಂಗಮಂದಿರದವರೆಗೆ ಶಿವಯೋಗಿ ಸಿದ್ಧರಾಮರ ಭಾವಚಿತ್ರ ಮೆರವಣಿಗೆ ಹಾಗೂ ಬೆಳಿಗ್ಗೆ ೧೧ ಗಂಟೆಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿದಲ್ಲಿ ನಡೆಯುವ ಜಯಂತಿ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ, ಸರ್ಕಾರದ ವಿಶೇಷ ಪ್ರತಿನಿಧಿ-೨ ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ, ಸಂಸದರಾದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ವಿ. ಪಾಟೀಲ, ಹಣಮಂತ್ ಆರ್. ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ. ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್. ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ (ರಾಜುಗೌಡ) ಪಾಟೀಲ, ಅಶೋಕ ಮನಗೂಳಿ, ಮಹಾನಗರ ಪಾಲಿಕೆ ಮಹಾಪೌರ ಶ್ರೀಮತಿ ಮಹೇಜಬಿನ ಹೊರ್ತಿ ಭಾಗವಹಿಸಲಿದ್ದಾರೆ. ಸಿಂದಗಿಯ ವಿಶ್ರಾಂತ ಪ್ರಾಧ್ಯಾಪಕ ಬಿ.ಎಸ್.ಪಾಟೀಲ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಬಸವರಾಜ ಎ.ನಾಟೀಕಾರ ಹಾಗೂ ಸಂಗಡಿಗರು ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
