ಇಂಡಿ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎ ಅಂತಿಮ ವರ್ಷದ ವಿದ್ಯಾರ್ಥಿನಿ ಪೂಜಾ ಸಾರವಾಡ ಇವರು ಕರ್ನಾಟಕ ಸರಕಾರದ ಕರ್ನಾಟಕ ಸ್ವೀಪ್ ಸಮಿತಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಪ್ರಾಚಾರ್ಯ ಆರ್.ಎಚ್. ರಮೇಶ ತಿಳಿಸಿದ್ದಾರೆ.
ವಿಜಯಪುರ ಜಿಲ್ಲಾ ಪಂಚಾಯತಿಯ ಜಿಲ್ಲಾ ಸ್ವೀಪ್ ಸಮಿತಿ ಏರ್ಪಡಿಸಿದ್ದ ಸ್ಪರ್ಧೆಯಲ್ಲೂ ಜಿಲ್ಲೆಗೆ ಮೊದಲಿಗಳಾಗಿ ಆಯ್ಕೆಯಾಗಿದ್ದ ಪೂಜಾ ಅವರು ೨೦೨೩-೨೪ನೇ ಸಾಲಿನ ರಾಷ್ಟ್ರೀಯ ಮತದಾರ ದಿನಾಚರಣೆ ಅಂಗವಾಗಿ ನಡೆದ ಕನ್ನಡ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈಗ ಫಲಿತಾಂಶ ಪ್ರಕಟವಾಗಿದೆ ಎಂದು ಪ್ರಾಚಾರ್ಯರು ತಿಳಿಸಿದ್ದು, ಕಾಲೇಜು ಅಭಿವೃದ್ದಿ ಸಮಿತಿಯು ವಿದ್ಯಾರ್ಥಿನಿಯನ್ನು ಅಭಿನಂದಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

