ತಿಕೋಟಾ: ತಾಲ್ಲೂಕಿನ ಹೊನವಾಡ ಗ್ರಾಮದಲ್ಲಿ ರೈತರು ಚರಗ ಚೆಲ್ಲುವ ಮೂಲಕ ಎಳ್ಳು ಅಮಾವಾಸ್ಯ ಆಚರಿಸಿದರು.
ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಎಳ್ಳು ಅಮವಾಸ್ಯೆ ದಿನ ರೈತರು, ರೈತ ಮಹಿಳೆಯರು ಮಕ್ಕಳು ಸೇರಿದಂತೆ ಮನೆ ಮಂದಿ ಚಕ್ಕಡಿ, ಟ್ರ್ಯಾಕ್ಟರ್ನಲ್ಲಿ ಬುತ್ತಿ ಕಟ್ಟಿಕೊಂಡು ಹೊಲಕ್ಕೆ ಹೋಗುತ್ತಾರೆ.
ಎಳ್ಳು ಹಚ್ಚಿದ ರೊಟ್ಟಿ, ಎಳ್ಳು ಕಡುಬು, ಕಡಲೆಗಡುಬು, ಬದನೆಕಾಯಿ ಪಲ್ಲೆ, ಚಟ್ನಿಯಂತಹ ವಿವಿಧ ಖಾದ್ಯಗಳನ್ನು ಕಟ್ಟಿಕೊಂಡು ಹೊಲಕ್ಕೆ ಹೋಗಿ, ಬೆಳೆದು ನಿಂತಿರೋ ಜೋಳ, ಕಡಲೆ ಸೇರಿದಂತೆ ಹಿಂಗಾರು ಬೆಳೆಯಲ್ಲಿ ಐದು ಕಲ್ಲಿನ ಪಂಡರು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ‘ಹುಲ್ಲು ಹುಲ್ಲಿಗೋ ಚೆಲ್ಲ ಚೆಲ್ಲಂಬರಿಗೋ’ ಎಂದು ಹೇಳುತ್ತಾ ಖಾದ್ಯಗಳನ್ನು ಹೊಲದ ತುಂಬೆಲ್ಲಾ ಚೆಲ್ಲುವುದೇ ಚರಗ. ಮನೆ ಮಂದಿ ಜೊತೆಗೆ ಹೊಲ ಇಲ್ಲದವರನ್ನು ಕರೆದುಕೊಂಡು ಚರಗ ಚೆಲ್ಲಲು ಹೋಗುವುದು ಇನ್ನೊಂದು ವಿಶೇಷ. ಮುತ್ತು ಹಿರೇಮಠ್ ಕುಟುಂಬದವರು ಎಲ್ಲ ಸ್ನೇಹಿತರೊಂದಿಗೆ ಅವರ ಹೊಲದಲ್ಲಿ ಚರಗ ಚೆಲ್ಲಿದ ಬಳಿಕ ಹೊಲದಲ್ಲಿ ಎಲ್ಲರೂ ಸೇರಿ ಸಹಭೋಜನ ಮಾಡಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

