ವಿಜಯಪುರ: ವಿವೇಕಾನಂದರ ವಿಚಾರ ಧಾರೆಗಳು ವಿಶೇಷವಾಗಿ ಯುವಕರನ್ನು ಪ್ರೇರೇಪಿಸುತ್ತದೆ ಮತ್ತು ಅವರ ಜೀವನವನ್ನು ರೂಪಿಸಲು ಸಹಾಯ ಮಾಡುತ್ತದೆ. ಭಾರತೀಯ ಯುವ ಜನಾಂಗಕ್ಕೆ ಸ್ವಾಮಿ ವಿವೇಕಾನಂದರ ಆದರ್ಶ ಹಾಗೂ ವಿಚಾರ ಧಾರೆಗಳು ಸ್ಪೂರ್ತಿದಾಯಕವಾಗಲಿವೆ ಎಂದು ಬಂಜಾರಾ ಪ್ರೌಢ ಶಾಲೆಯ ಮುಖ್ಯ ಗುರು ಇ.ಡಿ.ಲಮಾಣಿ ಹೇಳಿದರು.
ವಿಜಯಪುರ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರದಂದು ಸ್ವಾಮಿ ವಿವೇಕಾನಂದರ ಜನ್ಮದಿನ ಹಾಗೂ ರಾಷ್ಟ್ರೀಯ ಯುವ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ‘ಜಾತಿ ಎಂಬುದು ಸಮಾಜದ ಒಂದು ಆಂತರಿಕ ಭಾಗವಾಗಿದೆ. ಹಿಂದೆ ಅದು ವಿಕಾಸವಾಗುತ್ತಿತ್ತು. ಈಗ ಅದು ಘನೀಭೂತವಾಗಿದೆ. ಅದು ದುರ್ಗಂಧದಿಂದ ಭಾರತದ ವಾತಾವರಣವೆಲ್ಲ ತುಂಬಿದೆ ಎಂದು ಸ್ವಾಮಿ ವಿವೇಕಾನಂದರು ಕೋಮುವಾದದ ಕಟ್ಟಾ ವಿರೋಧಿಯಾಗಿದ್ದರು ಎಂದು ಹೇಳಿದರು.
ಶಿಕ್ಷಕ ಎಸ್.ವಿ.ದೇಶಪಾಂಡೆ ಪ್ರತಿಜ್ಞಾ ವಿಧಿ ಭೋಧಿಸಿದರು.
ಈ ವೇಳೆ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಗುರು ಸಂದೀಪ ರಾಠೋಡ, ಸೇರಿದಂತೆ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳ ಶಿಕ್ಷಕರುಗಳು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಸ್ವಾಗತ, ನಿರೂಪಣೆ ಹಾಗೂ ವಂದನಾರ್ಪಣೆಯನ್ನು ಆರ್.ವ್ಹಿ.ಬುಜಂಗನವರ ನೇರವೇರಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

