ವಿಜಯಪುರ: ತಾಲ್ಲೂಕಿನ ನಾಗಠಾಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಶ್ಯಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಿಸಿದ “ಅಡುಗೆ ಕೋಣೆ”ಯನ್ನು ಶುಕ್ರವಾರ ವಿಜಯಪುರ ತಾಲೂಕಾ ಪಂಚಾಯತ್ ಸಹಾಯಕ ನಿರ್ದೇಶಕರಾದ ಕಾಸಿಂಮಸಾಬ ಮಸಳಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ನರೇಗಾ ಯೋಜನೆಯು ಗ್ರಾಮೀಣ ಜನರಿಗೆ ೩೧೬ ರೂ ಕೂಲಿ ಜೊತೆಗೆ ೧೦೦ ದಿನಗಳ ಉದ್ಯೋಗ ಖಾತರಿ ನೀಡುವವರ ಜೊತೆಗೆ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸಹ ನೆರವು ನೀಡುತ್ತಿದೆ. ಸರಕಾರಿ ಪ್ರಾರ್ಥಮಿಕ & ಪ್ರೌಢಶಾಲೆಗಳಲ್ಲು ಶಾಲಾ ಆಟದ ಮೈದಾನ, ಶೌಚಾಲಯ, ಕಂಪೌಂಡ ಗೋಡೆ, ಅಡುಗೆ ಕೋಣೆಯಂತಹ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಗ್ರಾಮ ಪಂಚಾಯತಿ ಅಧಿಕಾರಿಗಳು, ಸದಸ್ಯರುಗಳು ಮತ್ತು ಶಾಲಾ ಶಿಕ್ಷಕರು ಸಮನ್ವಯತೆಯಿಂದ ಈ ಮೇಲಿನ ಕಾಮಗಾರಿಗಳನ್ನು ಪಡೆದುಕೊಂಡು ಶಾಲೆಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.
ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಬಸಪ್ಪ ಹಳ್ಳಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಆರ್.ರಾಠೋಡ್, ತಾಲೂಕು ತಾಂತ್ರಿಕ ಸಂಯೋಜಕ ಪರಶುರಾಮ ಶಹಾಪುರ, ಐಇಸಿ ಸಂಯೋಜಕ ರಾಘವೇಂದ್ರ ಭಜಂತ್ರಿ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

