ಇಂಡಿ: ಸ್ವಾಮಿ ವಿವೇಕಾನಂದರ ತತ್ವ, ಸಿದ್ಧಾಂತ ಆದರ್ಶ ಇಂದಿನ ಯುವ ಜನಾಂಗ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಕಾರ್ಯ ಮಾಡಬೇಕು ಅಂದಾಗ ಮಾತ್ರ ವಿವೇಕಾನಂದರ ಜಯಂತ್ಯುತ್ಸವಕ್ಕೆ ಮೆರಗು ಬರುತ್ತದೆ ಎಂದು ತಹಸೀಲ್ದಾರ ಬಿ.ಎಸ್. ಕಡಕಭಾವಿ ಹೇಳಿದರು.
ಶುಕ್ರವಾರ ಪಟ್ಟಣದ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ವಿವೇಕಾನಂದರ ೧೬೧ ನೇ ಜಯಂತ್ಯೋತ್ಸವದ ಪ್ರಯುಕ್ತ ಯುವ ಶಕ್ತಿ ಸಂಘ ಹಮ್ಮಿಕೊಂಡಿದ್ದ ಕಾರ‍್ಯಕ್ರಮದಲ್ಲಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಅವರು ಮಾತನಾಡಿದರು.
ಸಂಘದ ಅಧ್ಯಕ್ಷ ರಾಮಸಿಂಗ ಕನ್ನೂಳ್ಳಿ, ಅವಿನಾಶ ಬಗಲಿ ಪ್ರಾಸ್ತಾವಿಕ ಮಾತನಾಡಿದರು.
ಮುಖಂಡರಾದ ಜಗದೀಶ ಕ್ಷತ್ರಿ, ಸತೀಶ ಕುಂಬಾರ, ಶ್ರೀಕಾಂತ ಕುಡಿಗನೂರ, ಬಾಳು ಮುಳಜಿ, ಪ್ರಕಾಶ ಬಿರಾದಾರ, ಸಂತೋಷ ಪಾಟೀಲ, ವೆಂಕಟೇಶ ಕುಲಕರ್ಣಿ, ಮಲ್ಲಿಕಾರ್ಜುನ ಹತ್ತಿ, ಅರವಿಂದ ಪಾಟೀಲ, ಚಂದು ದೇವರ, ನಾಗರಾಜ ದಶವಂತ, ಆನಂದ ದೇವರ ಸೇರಿದಂತೆ ಮತ್ತಿತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

