ಬಸವನಬಾಗೇವಾಡಿ: ತಾಲೂಕಿನ ನಾಗೂರ ಗ್ರಾಮದ ಯಮನೂರೇಶ್ವರ ದೇವಸ್ಥಾನ ಆವರಣದಲ್ಲಿ ಜ.೧೭ ರಂದು ಸಂಜೆ ೬ ಗಂಟೆಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾಧ್ಯಕ್ಷರ ಅಭಿನಂದನಾ ಸಮಾರಂಭ ಹಾಗೂ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಚನ್ನಬಸವಸ್ವಾಮೀಜಿ, ಸಿದ್ದರಾಮ ಸ್ವಾಮೀಜಿ, ಡಾ.ಸಿದ್ದಲಿಂಗ ಸ್ವಾಮೀಜಿ, ಗುರುಸಂಗನಬಸವ ಸ್ವಾಮೀಜಿ, ವೀರರುದ್ರಮುನಿ ಶಿವಾಚಾರ್ಯರು, ಅಭಿನವ ಸಂಗನಬಸವ ಶಿವಾಚಾರ್ಯರು, ಸಿದ್ದಲಿಂಗ ಸ್ವಾಮೀಜಿ, ಶಿವಪ್ರಕಾಶ ಶಿವಾಚಾರ್ಯರು, ಬೃಂಗೀಶ್ವರಲಿಂಗ ಶಿವಾಚಾರ್ಯರು, ಶಿವಕುಮಾರ ಸ್ವಾಮೀಜಿ, ಶಿವಪುತ್ರಯ್ಯ ಸ್ವಾಮೀಜಿ, ದಾಕ್ಷಾಯಣಿ ಅಮ್ಮನವರು ವಹಿಸವರು. ಸಚಿವ ಶಿವಾನಂದ ಪಾಟೀಲ ಉದ್ಘಾಟಿಸುವರು. ಶಾಸಕ ರಾಜುಗೌಡ ಪಾಟೀಲ ಅವರು ನಾಡದೇವಿ ಭಾವಚಿತ್ರಕ್ಕೆ ಪುಷಾರ್ಚನೆಗೈಯುವರು. ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ ವಹಿಸುವರು. ತಾಲೂಕು ಕಸಾಪ ನೂತನ ಅಧ್ಯಕ್ಷ ಶಿವಾನಂದ ಡೋಣೂರ ಆಶಯ ನುಡಿಗಳನ್ನಾಡುವರು. ಮುಖ್ಯಅತಿಥಿಗಳಾಗಿ ಮುಖಂಡರಾದ ಈರಣ್ಣ ಪಟ್ಟಣಶೆಟ್ಟಿ, ಸುರೇಶ ಹಾರಿವಾಳ, ಸಂಗನಗೌಡ ಚಿಕ್ಕೊಂಡ, ಶಿವನಗೌಡ ಬಿರಾದಾರ, ಭರತ ಅಗರವಾಲ, ಶಿವಾನಂದ ಮಂಗಾನವರ, ಚಂದ್ರೇಶೇಖರ ಮರೋಳ, ಚಂದ್ರಶೇಖರ ಮುಳವಾಡ, ಎಂ.ಬಿ.ರಗಟಿ ಆಗಮಿಸುವರು. ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ಬಿಇಓ ವಸಂತ ರಾಠೋಡ, ಜಿಲ್ಲಾ ಕಸಾಪ ಸಂಘಟನಾ ಕಾರ್ಯದರ್ಶಿ ಅಭಿಷೇಕ ಚಕ್ರವರ್ತಿ, ಜಿಲ್ಲಾ ಕಸಾಪ ದತ್ತಿ ಸಂಚಾಲಕ ರಾಜೇಸಾಬ ಶಿವನಗುತ್ತಿ ಘನ ಉಪಸ್ಥಿತಿರುವರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರನ್ನು ಸನ್ಮಾನಿಸಲಾಗುವುದು ಎಂದು ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಶಿವಪ್ಪ ಮಡಿಕೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
