ಬಸವನಬಾಗೇವಾಡಿ: ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದಲ್ಲಿನ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 2024-25 ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿಗೆ ದಾಖಲಾತಿಗಾಗಿ ನಡೆಸುವ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
2023-24ನೇ ಸಾಲಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಆನ್ ಲೈನ್ ವೆಬಸೈಟ್www.schooleducation.kar.nic.in
ಮೂಲಕ ಫೆ.6 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಮಾಹಿತಿಗಾಗಿ ಮುಖ್ಯಶಿಕ್ಷಕ ಸುಭಾಸ ಹರಿಜನ (9880789382) ಹಾಗೂ ಚಿತ್ರಕಲಾ ಶಿಕ್ಷಕ ಸಿ.ಜಿ.ಬಾಗೇವಾಡಿ (9481573922) ಅವರನ್ನು ಸಂಪರ್ಕಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
