ದೇವರಹಿಪ್ಪರಗಿ: ಜಿಲ್ಲಾ ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾಗಿ ಆರ್.ಎಸ್.ಪಾಟೀಲ(ಕುಚಬಾಳ) ಎರಡನೆಯ ಬಾರಿಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಿಸಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಸೇರಿದ ಕಾರ್ಯಕರ್ತರು ನೂತನ ಅಧ್ಯಕ್ಷರ ಆಯ್ಕೆಗೆ ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ರಮೇಶ ಮಸಬಿನಾಳ ಮಾತನಾಡಿ, ಮುಂದಿನ ಲೋಕಸಭೆಯ ಚುನಾವಣೆಯಲ್ಲಿ ನೂತನ ಅಧ್ಯಕ್ಷರ ನೇತೃತ್ವದಲ್ಲಿ ಪಕ್ಷ ಜಿಲ್ಲೆಯಲ್ಲಿ ಮತ್ತೆ ಜಯಭೇರಿ ಭಾರಿಸಿ ನೆಚ್ಚಿನ ಪ್ರಧಾನಿ ಮೋದಿಯವರ ಕೈ ಬಲಪಡಿಸುವುದರಲ್ಲಿ ಯಾವುದೇ ಸಂದೇಹವಿಲ್ಲ. ನಾವೆಲ್ಲ ಕಾರ್ಯಕರ್ತರು ನೂತನ ಅಧ್ಯಕ್ಷರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬಲಪಡಿಸೋಣ ಹಾಗೂ ಮುನ್ನಡೆಸೋಣ ಎಂದರು.
ಯುವಮೋರ್ಚಾ ಜಿಲ್ಲಾ ಸಾಮಾಜಿಕ ಜಾಲತಾಣದ ಸಹ ಸಂಚಾಲಕ ಶಿವರಾಜ ತಳವಾರ, ಸೋಮು ದೇವೂರ, ಮಹಾಂತೇಶ ಗುಡಿಮನಿ, ಚಂದ್ರಶೇಖರ ದಾನಗೊಂಡ, ಕಾಶೀನಾಥ ಚವ್ಹಾಣ, ಸಾಹೇಬಗೌಡ ಬಿರಾದಾರ, ಪರಮಾನಂದ ಹಳ್ಳಿ ಸೇರಿದಂತೆ ಇತರರು ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

