Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿಗೆ ೨೫ ಸಾವಿರಕ್ಕೂ ಅಧಿಕ ಪ್ರವಾಸಿಗರ ಭೇಟಿ!
(ರಾಜ್ಯ ) ಜಿಲ್ಲೆ

ಆಲಮಟ್ಟಿಗೆ ೨೫ ಸಾವಿರಕ್ಕೂ ಅಧಿಕ ಪ್ರವಾಸಿಗರ ಭೇಟಿ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

– ಸಂಪದಾ ಹಿರೇಮಠ
ಆಲಮಟ್ಟಿ: ಹೊಸವರ್ಷದ ಪ್ರಥಮ ಹಬ್ಬವೆಂದೇ ಕರೆಯಲಾಗುತ್ತಿರುವ ಎಳ್ಳ ಅಮವಾಸ್ಯೆಯ ಮಕರ ಸಂಕ್ರಮಣ ದಿನವಾದ ಸೋಮವಾರ ಮುಂಜಾನೆಯಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು, ಪ್ರವಾಸಿಗರು ಆಲಮಟ್ಟಿಗೆ ಆಗಮಿಸಿ ಕೃಷ್ಣೆಯ ಎಡ ಮತ್ತು ಬಲಬದಿಗಳಲ್ಲಿ ಪವಿತ್ರ ಸ್ನಾನ ಮಾಡುತ್ತಿರುವುದು ವಿಶೇಷವಾಗಿತ್ತು.
ಮಕರಸಂಕ್ರಮಣದ ದಿನದಂದು ಸೂರ್ಯನು ತನ್ನ ಪಥವನ್ನು ಬದಲಾಯಿಸಿ ದಕ್ಷಿಣಾಯಣದಿಂದ ಉತ್ತರಾಯಣದ ಕಡೆಗೆ ವಾಲುತ್ತಾನೆ. ಈ ದಿನದಂದು ಪವಿತ್ರ ಕೃಷ್ಣೆಯಲ್ಲಿ ಎಳ್ಳು ಮೈಗೆ ಹಚ್ಚಿಕೊಂಡು ಮಿಂದೆದ್ದು ಉಳಿದವರಿಗೂ ಎಳ್ಳನ್ನು ಹಂಚಿ ದೇವಸ್ಥಾನಗಳಿಗೆ ತೆರಳಿ ದೇವರುಗಳ ದರ್ಶನ ಪಡೆದರೆ ಪುಣ್ಯಪ್ರಾಪ್ತಿಯಾಗುತ್ತದೆಂಬ ನಂಬಿಕೆಯಿಂದ ಸಾವಿರಾರು ಸಂಖ್ಯೆಯಲ್ಲಿ ಮಕ್ಕಳು, ಮಹಿಳೆಯರು, ವಯೋವೃದ್ಧರು ಸೇರಿದಂತೆ ಎಲ್ಲ ವಯೋಮಾನದವರು ಲಿಂಗಭೆದವಿಲ್ಲದೇ ಶಾಸ್ತ್ರಿ ಜಲಾಶಯದ ಹಿನ್ನೀರು ಹಾಗೂ ಮುನ್ನೀರು ಪ್ರದೇಶಗಳಾಗಿರುವ ಪಾರ್ವತಿ ಕಟ್ಟೆ ಸೇತುವೆ ಕೆಳಭಾಗ, ಚಂದ್ರಮ್ಮಾದೇವಿ ದೇವಸ್ಥಾನದ ಬಳಿ, ಕೃಷ್ಣಾ ಸೇತುವೆಗಳ ಕೆಳಭಾಗದಲ್ಲಿ, ಸೀತಿಮನಿ, ಮನಹಳ್ಳಿ, ಯಲಗೂರ, ಯಲ್ಲಮ್ಮನ ಬೂದಿಹಾಳಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪವಿತ್ರ ಸ್ನಾನ ಮಾಡಿದರು.
*ಸ್ಥಳಾಭಾವ:* ದೂರದ ಊರುಗಳಿಂದ ಆಗಮಿಸಿದ್ದ ಪ್ರವಾಸಿಗರು ತಮ್ಮ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್‌ನಲ್ಲಿ ಸ್ಥಳಾವಕಾಶ ಸಿಗದೇ ಇರುವದರಿಂದ ಲಾಲ್‌ಬಹಾದ್ದೂರ್ ಶಾಸ್ತ್ರಿ ವೃತ್ತದಿಂದ ಜಲಾಶಯದ ಕಟ್ಟಡದ ವೃತ್ತದವರೆಗೂ ರಸ್ತೆಗಳ ಎರಡೂ ಬದಿಗಳಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ ತಮ್ಮ ಮಕ್ಕಳನ್ನು ವಾಹನದಿಂದ ಕೆಳಗಿಳಿಸಲು ಹಿಂದೊಮ್ಮೆ ಮುಂದೆಯೊಮ್ಮೆ ನೋಡಿಯೇ ಕೆಳಗಿಳಿಸಿ ಉದ್ಯಾನಗಳನ್ನು ವೀಕ್ಷಿಸಲು ಕರೆದುಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗಿತ್ತು.
*ಹಿಡಿಶಾಪ:* ಪ್ರವಾಸಿ ತಾಣ ಆಲಮಟ್ಟಿಗೆ ಆಗಮಿಸುವ ಪ್ರವಾಸಿಗರಿಗೆ ತೊಂದರೆಯಾಗಬಾರದೆನ್ನುವ ಮಹದುದ್ದೇಶದಿಂದ  ಅಗತ್ಯ ಸ್ಥಳಗಳಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮದವತಿಯಿಂದ ಕುಡಿಯುವ ನೀರಿನ ನಲ್ಲಿ, ಶೌಚಾಲಯಗಳನ್ನು ನಿರ್ಮಿಸಿದ್ದರೂ ನಿರ್ವಹಣೆಯ ಕೊರತೆಯಿಂದ ಕೆಲ ಶೌಚಾಲಯಗಳು ಬಂದ್ ಆಗಿದ್ದರೆ ಇನ್ನು ಕೆಲ ಶೌಚಾಲಯಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಪ್ರವಾಸಿಗರು ಕೃಷ್ಣಾಭಾಗ್ಯ ಜಲ ನಿಗಮದ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿರುವುದು ಕಂಡುಬಂತು.
*ಆಗ್ರಹ:* ರೈತರ ಹಬ್ಬಗಳಲ್ಲಿ ಒಂದಾಗಿರುವ ಮಕರಸಂಕ್ರಮಣದ ದಿನಗಳಂದ ಕೂಡಲಸಂಗಮದ ಶರ ಣಮೇಳ ಮತ್ತು ವಿಜಯಪುರದ ಸಿದ್ದೇಶ್ವರ ಜಾತ್ರೆಗಳಿಗೆ ಭೇಟಿ ನೀಡಿದ ರೈತರು ಆಲಮಟ್ಟಿಗೆ ಆಗಮಿಸುತ್ತಾರೆ. ಜಲಸಂಪನ್ಮೂಲ ಹೇರಳವಾಗಿರುವ ಆಲಮಟ್ಟಿಯಲ್ಲಿ ಸರ್ಕಾರ ನೀರು ಮತ್ತು ಮಣ್ಣಿನ ಬಳಕೆ, ಸಾವಯವ ಕೃಷಿ, ಹೈನುಗಾರಿಕೆ, ಜೇನುಸಾಕಾಣಿಕೆ ಹೀಗೆ ರೈತ ಉತ್ಪನ್ನಗಳ ಬಗ್ಗೆ ಅರಿವು ಮೂಡಿಸಲು ರೈತ ಸಮ್ಮೆಳನ ನಡೆಸಬೇಕು ಎಂದು ರಾಯಚೂರಿನ ಸೂಗಪ್ಪ ಚಲವಾದಿ ಆಗ್ರಹಿಸಿದರು.
*ಒತ್ತಾಯ:* ಏಷ್ಯಾಖಂಡದಲ್ಲಿಯೇ ಬೃಹತ್ ನೀರಾವರಿ ಯೋಜನೆಗಳಲ್ಲಿಯೇ ದ್ವಿತೀಯ ಸ್ಥಾನದಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಕೇಂದ್ರಸ್ಥಾನ ಆಲಮಟ್ಟಿಗೆ ಪ್ರತಿ ದಿನ ಉದ್ಯಾನಗಳನ್ನು ವೀಕ್ಷಿಸಲು ಮತ್ತು ಸಾಕ್ಷಾತ್ ಪಾರ್ವತಿ ಅವತಾರವೆಂದೇ ಕರೆಯಲಾಗುತ್ತಿರುವ ಚಂದ್ರಮ್ಮಾದೇವಿ ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತರು, ಚಂದ್ರಮ್ಮದೇವಿ ದೇವಸ್ಥಾನದ ಬಳಿಯಿರುವ ಸಾಸ್ತಿç ಸಾಗರ ಜಲಾಶಯದ ಹಿನ್ನೀರು ಪ್ರದೇಶಗಳಲ್ಲಿ ಪವಿತ್ರ ಸ್ನಾನ ಮಾಡುತ್ತಾರೆ. ಇನ್ನು ಯುಗಾದಿ, ದೀಪಾವಳಿಗಳಂತಹ ದಿನಗಳಲ್ಲಿ ರಾಜ್ಯದ ಮತ್ತು ಹೊರರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಪಲ್ಲಕ್ಕಿ, ಚೌಕಿಗಳನ್ನು ಛತ್ರಿ ಚಾಮರಗಳೊಂದಿಗೆ ಭಕ್ತಾದಿಗಳು ಆಗಮಿಸುತ್ತಾರೆ.
ಹಿನ್ನೀರು ಪ್ರದೇಶಗಳಲ್ಲಿ ಬೃಹತ್ ತಗ್ಗುಗಳು, ಮುಳ್ಳುಕಂಟಿಗಳಿವೆ ಇದರಿಂದ ಭಕ್ತರ ಜೀವಕ್ಕೆ ಹಾನಿಯಾಗಿರುವ ಘಟನೆಗಳು ಹಲವಾರು ಸಂಭವಿಸಿವೆ, ಜೀವಹಾನಿ ತಪ್ಪಿಸಲು ಚಂದ್ರಮ್ಮಾದೇವಿ ದೇವಸ್ಥಾನದ ಬಳಿಯಿರುವ ಹಿನ್ನೀರು ಪ್ರದೇಶದಲ್ಲಿ ಸುಸಜ್ಜಿತ ಸ್ನಾನಘಟ್ಟಿ ನಿರ್ಮಿಸಬೇಕು ಎನ್ನುತ್ತಾರೆ ರಾಜಶೇಖರಯ್ಯ ಹಿರೇಮಠ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.