Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿಮ್ಮಡದಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮಾಚರಣೆ
(ರಾಜ್ಯ ) ಜಿಲ್ಲೆ

ಚಿಮ್ಮಡದಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮಾಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

– ಇಲಾಹಿ ಇ. ಜಮಖಂಡಿ

ಚಿಮ್ಮಡ: ಆಧುನಿಕತೆಯ ಭರಾಟೆ ನಡುವೆಯೂ ಉತ್ತರ ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ ಸಂಕ್ರಾಂತಿ ಎಂದೇ ಕರೆಯಲ್ಪಡುವ ಮಕರ ಸಂಕ್ರಮಣವನ್ನು ಈ ಭಾಗದಲ್ಲಿ ಸೋಮವಾರ ಮತ್ತು ಮಂಗಳವಾರ ಸಂಭ್ರಮ, ಸಡಗರದೊಂದಿಗೆ ಆಚರಿಸಲಾಯಿತು.
ಸೂರ್ಯದೇವನು ತನ್ನ ಪಥ ಬದಲಾಯಿಸಿ ಒಂದು ರಾಶಿಯಿಂದ ಮತ್ತೊಂದು ರಾಶಿಯತ್ತ ತನ್ನ ಕಿರಣ ಬೀರುತ್ತಾನೆ. ದಕ್ಷಿಣ ದಿಕ್ಕಿನಿಂದ ಉತ್ತರದ ಕಡೆಗೆ ಅರ್ದ ವರ್ಷ ಪಯಣ ಮಾಡಿ ಮಕರ ರಾಶಿಗೆ ಆಗಮಿಸುತ್ತಾನೆ ಎಂಬುದು ಧಾರ್ಮಿಕ ನಂಬಿಕೆ. ಈ ಸಮಯದಲ್ಲಿ ರೈತಾಪಿ ಜನರ ಸುಗ್ಗಿಕಾಲವಾಗಿದ್ದು ಸುಗ್ಗಿಯನ್ನು ಮುಕಾಯಗೊಳಿಸಿ ಭುವಿಯನ್ನು ಸೂರ್ಯನ ಒಡಲಿಗೆ ಹರಿಬಿಟ್ಟು ವಿವಿಧ ಬಣ್ಣ ವಸ್ತುಗಳಿಂದ ಶೃಂಗರಿಸಿದ ಎತ್ತಿನ ಬಂಡಿ ಹೂಡಿಕೊಂಡು ಇಡೀ ಕುಟುಂಬದೊಂದಿಗೆ ತಮ್ಮ ನಂಬಿಕೆಯ ದೇವರ ದರ್ಶನ ಮಾಡಿಕೊಂಡು ಕರೀ ದಿನವಾದ ಮಂಗಳವಾರ ನದೀ ತೀರಕ್ಕೆ ಹೋಗಿ ವಿಶೇಷ ಅಡುಗೆ ತಯಾರಿಸಿಕೊಂಡು ಕುಟುಂಬದೊಂದಿಗೆ ಊಟಮಾಡಿ ಜಲ ಚರಗಳಿಗೂ ಉಣಬಡಿಸಿ ಇಡೀದಿನ ಪ್ರಕೃತಿ ಮಡಿಲಲ್ಲಿ ಕಳೆಯುವ ಪಧ್ಧತಿ ಮೊದಲಿನಿಂದಲೂ ನಡೆದುಕೊಂಡು ಬಂದಿದ್ದು, ಅದರಂತೆ ಸೋಮವಾರವೂ ಈ ಭಾಗದ ರೈತರು ಚಿಮ್ಮಡ ಹಾಗೂ ಮಹಾಲಿಂಗಪುರದ ಅಲಂಕೃತ ನಂದಿಕೋಲು, ಪ್ರಭುವಿನ ಮೂರ್ತಿಹೊತ್ತ ಪಲ್ಲಕ್ಕಿ, ಮಲ್ಲಿಕಾರ್ಜುನ ದೇವರ ಕಂಬಿಯನ್ನು ಹೊತ್ತುಕೊಂಡು ಸಕಲವಾದ್ಯ ವೃಂದಗಳೊಂದಿಗೆ ಗ್ರಾಮದ ಪ್ರಮುಖರಸ್ತೆಗಳಲ್ಲಿ ಭಕ್ತಿ-ಗೌರವದೊಂದಿಗೆ ಮೆರವಣಿಯ ಮೂಲಕ ರಬಕವಿಯ ಕೃಷ್ಣಾನದಿ ತೀರಕ್ಕೆ ಹೋಗಿ ನದಿಯಲ್ಲಿ ಮಿಂದೆದ್ದು “ಈಶ್ವರಲಿಂಗ”ದ ದರ್ಶನ ಪಡೆದು ಸಾಯಂಕಾಲ ವಾಪಸ್ಸಾಗುತ್ತಾರೆ. ಅಲ್ಲಿಂದ ಗ್ರಾಮದ ರೈತಾಪಿ ಜನರೆಲ್ಲ ಸೇರಿ ಪಾದಯಾತ್ರೆ ಮೂಲಕ ಗ್ರಾಮದ ಪ್ರಭುಲಿಂಗೇಶ್ವರ ದೇವಸ್ಥಾನದ ವರೆಗೆ ಬಂದು ಅಲ್ಲಿ ವಿಶೇಷ ಪೂಜೆ ನೆರವೇರಿಸಿ ನಂತರ ಮಹಾಲಿಂಗಪುರದ ನಂದಿಕೋಲವನ್ನು ಬೀಳ್ಕೊಡಲಾಯಿತು.
ಈ ಉತ್ಸವದಲ್ಲಿ ಗ್ರಾಂ.ಪಂ. ಮಾಜಿ ಅಧ್ಯಕ್ಷ ಗುರಲಿಂಗಪ್ಪಾ ಪೂಜಾರಿ, ಪ್ರಮುಖರಾದ ರಾಮಣ್ಣ ಮುಗಳಖೋಡ, ಪುಂಡಲಿಕಪ್ಪಾ ಪೂಜಾರಿ, ಬಾಳಪ್ಪಾ ಹಳಿಂಗಳಿ, ಗುರಪ್ಪಾ ಬಳಗಾರ, ಗ್ರಾಂಪಂ ಮಾಜಿ ಅಧ್ಯಕ್ಷ ಪರಪ್ಪಾ ಪಾಲಭಾವಿ, ಬೀರಪ್ಪ ಹಳೆಮನಿ, ಬಸವರಾಜ ಕುಂಚನೂರ, ಸೇರಿದಂತೆ ಚಿಮ್ಮಡ, ಮಹಾಲಿಂಗಪುರ ಭಾಗದ ಹಲವಾರು ಪ್ರಮುಖರು ಪಾಲ್ಗೊಂಡಿದ್ದರು.
ಗ್ರಾಪಂ ಮಾಜಿ ಅಧ್ಯಕ್ಷ ಪರಪ್ಪಾ ಪಾಲಭಾವಿ ಭಕ್ತಾಧಿಗಳಿಗೆ ಅಲ್ಪೋಪಹಾರದ ವ್ಯವಸ್ಥೆ ಕೈಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.