ವಿಜಯಪುರ: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ೨೦೨೨ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ ಕೃತಿಗಳನ್ನು ಆಹ್ವಾನಿಸಿದೆ.
ಪ್ರತಿ ಆಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು ೨೦೨೨ರ ಜನವರಿ ೦೧ ರಿಂದ ೨೦೨೨ರ ಡಿಸೆಂಬರ್ ೩೧ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃಷಿಯಲ್ಲಿ ಪ್ರಥಮ ಮುದ್ರಣ ೨೦೨೨ ಎಂದು ಮುದ್ರಿತವಾಗಿರಬೇಕು.
ಆಸಕ್ತರು ತಲಾ ೪ ಪ್ರತಿಗಳನ್ನು ರಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ೨ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-೫೬೦೦೦೨ ಇವರಿಗೆ ರಿಜಿಸ್ಟರ್ಡ ಅಂಚೆ ಅಥವಾ ಕೊರಿಯರ್ ಮೂಲಕ ಅಥವಾ ಖುದ್ದಾಗಿ ೨೦೨೪ರ ಫೆಬ್ರುವರಿ ೨೦ರೊಳಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: ೦೮೦-೨೨೨೧೧೭೩೦, ೨೨೧೦೬೪೬೦ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
