Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರಕ್ಕೆ ಜ.೨೬ರಂದು ಚಾಲನೆ
(ರಾಜ್ಯ ) ಜಿಲ್ಲೆ

ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರಕ್ಕೆ ಜ.೨೬ರಂದು ಚಾಲನೆ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವ್ಯವಸ್ಥಿತ ನಿರ್ವಹಣೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಆದೇಶ

ವಿಜಯಪುರ: ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಕ್ಕೆ ಎಲ್ಲ ಜಿಲ್ಲಾ ಕೇಂದ್ರಗಳ ಮೂಲಕ ಚಾಲನೆ ನೀಡಲು ಉದ್ದೇಶಿಸಲಾಗಿರುವ ಜಾಗೃತಿ ಜಾಥಾದ ಸ್ತಬ್ಧ ಚಿತ್ರಕ್ಕೆ ಜಿಲ್ಲೆಯಲ್ಲಿ ಜನವರಿ ೨೬ ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕೆಸ್ವಾನ್ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ವಿವಿಧ ಅಧಿಕಾರಿಗಳೊಂದಿಗೆ ಭಾರತದ ಸಂವಿಧಾನ ಮತ್ತು ಏಕತೆ ಕಾರ್ಯಕ್ರಮವನ್ನು ಆಚರಿಸುವ ಕುರಿತು ಪ್ರಸ್ತಾಪಿಸಲು ಹಾಗೂ ಏಕಕಾಲದಲ್ಲಿ ರಾಜ್ಯದ ೩೧ ಜಿಲ್ಲೆಗಳಲ್ಲಿ ಆಚರಿಸುವ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರದ ಮೆರವಣಿಗೆಗೆ ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ ಎರಡೂ ಸ್ತಬ್ಧಚಿತ್ರಗಳು ಜಿಲ್ಲೆಯಾದ್ಯಂತ ೨೭ ದಿನಗಳ ಕಾಲ ಸಂಚರಿಸಲಿವೆ. ಜನವರಿ ೨೬ ರಿಂದ ಫೆಬ್ರವರಿ ೨೩ರವರೆಗೆ ಸ್ತಬ್ಧಚಿತ್ರ ಜಿಲ್ಲೆಯಾದ್ಯಂತ ಸಂಚರಿಸಿ, ಫೆ.೨೩ರಂದು ಬೆಂಗಳೂರಿಗೆ ಎರಡೂ ಸ್ತಬ್ಧಚಿತ್ರಗಳು ತಲುಪಲಿವೆ. ಒಂದು ವಿಜಯಪುರದಿಂದ ಹಾಗೂ ಇನ್ನೊಂದು ಇಂಡಿಯಿAದ ಸ್ತಬ್ಧಚಿತ್ರ ಸಂಚರಿಸಲಿದೆ. ಜಿಲ್ಲೆಯ ೧೩ ತಾಲೂಕಿನ ೨೧೧ ಗ್ರಾಮ ಪಂಚಾಯತಿ ಹಾಗೂ ಪಟ್ಟಣ ಪಂಚಾಯತಿ ಪುರಸಭೆ ವ್ಯಾಪ್ತಿಗಳಲ್ಲಿ ಸ್ತಬ್ಧಚಿತ್ರ ಸಂಚರಿಸಲಿವೆ ಎಂದು ಹೇಳಿದರು.
ಜಿಲ್ಲೆಯ ಚಡಚಣ ತಾಲೂಕಿನಲ್ಲಿ ೩ ದಿನ, ಇಂಡಿ ತಾಲೂಕಿನಲ್ಲಿ ೯ ದಿನ, ಆಲಮೇಲ ತಾಲೂಕಿನಲ್ಲಿ ೩ ದಿನ, ದೇವರಹಿಪ್ಪರಗಿ ತಾಲೂಕಿನಲ್ಲಿ ೪ ದಿನ, ಸಿಂದಗಿ ತಾಲೂಕಿನಲ್ಲಿ ೪ ದಿನ, ತಾಳಿಕೋಟೆ ತಾಲೂಕಿನಲ್ಲಿ ೪ ದಿನ, ಮುದ್ದೇಬಿಹಾಳ ತಾಲೂಕಿನಲ್ಲಿ ೬ ದಿನ, ಬಸವನಬಾಗೇವಾಡಿ ತಾಲೂಕಿನಲ್ಲಿ ೪ ದಿನ, ಕೊಲ್ಹಾರ ತಾಲೂಕಿನಲ್ಲಿ ೨ ದಿನ, ಬಬಲೇಶ್ವರ ತಾಲೂಕಿನಲ್ಲಿ ೪ ದಿನ, ತಿಕೋಟಾ ತಾಲೂಕಿನಲ್ಲಿ ೪ ದಿನ ಹಾಗೂ ವಿಜಯಪುರ ತಾಲೂಕಿನಲ್ಲಿ ೬ ದಿನ, ನಿಡಗುಂದಿ ತಾಲೂಕಿನಲ್ಲಿ ೩ ದಿನ ಕಾಲ ಸ್ತಬ್ಧಚಿತ್ರ ಸಂಚರಿಸಲಿವೆ ಎಂದು ಅವರು ಹೇಳಿದರು.
ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರಗಳ ಮೆರವಣಿಗೆಗೆ ಸಂಬಂಧಿಸಿದಂತೆ ವಿಜಯಪುರ ತಾಲೂಕಿಗೆ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಎನ್.ಕೆ.ಗೋಠೆ (ಮೊ:೯೪೮೦೮೫೭೦೦೪), ಬಬಲೇಶ್ವರ ತಾಲೂಕಿಗೆ ಕೃಷಿ ಇಲಾಖೆ ಉಪನಿರ್ದೇಶಕ ಪ್ರಕಾಶ ಚವ್ಹಾಣ (ಮೊ:೮೨೭೭೯೩೦೬೦೨), ತಿಕೋಟಾ ತಾಲೂಕಿಗೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ, ಇಂಡಿ ತಾಲೂಕಿಗೆ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಮ ವಿಜಯಕುಮಾರ ಮೆಕ್ಕಳಕಿ, ಚಡಚಣ ತಾಲೂಕಿಗೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸಿ.ಬಿ.ಕುಂಬಾರ ಹಾಗೂ ಸಿಂದಗಿ ತಾಲೂಕಿಗೆ ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಉಪನಿರ್ದೇಶಕ ವಿನಯ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ.
ದೇವರಹಿಪ್ಪರಗಿ ತಾಲೂಕಿಗೆ ಇಂಡಿ ಕೃಷಿ ಇಲಾಖೆ ಉಪನಿರ್ದೇಶಕ ಚಂದ್ರಕಾಂತ ಪವಾರ, ಆಲಮೇಲ ತಾಲೂಕಿಗೆ ಅಲ್ಪಸಂಖ್ಯಾತರ ಇಲಾಕೆ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಮುದ್ದೇಬಿಹಾಳ ತಾಲೂಕಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಈರಣ್ಣ ಆಶಾಪುರ, ತಾಳಿಕೋಟೆ ತಾಲೂಕಿಗೆ ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುಳಗುಂದ, ಬಸವನಬಾಗೇವಾಡಿ ತಾಲೂಕಿಗೆ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಕೊಲ್ಹಾರ ತಾಲೂಕಿಗೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಚ್.ನಾಗೂರ ಹಾಗೂ ನಿಡಗುಂದಿ ತಾಲೂಕಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ ಅವರನ್ನು ನೇಮಕ ಮಾಡಲಾಗಿದ್ದು, ಎರಡೂ ಸ್ತಬ್ಧ ಚಿತ್ರಗಳು ವ್ಯವಸ್ಥಿತವಾಗಿ ಸಂಚರಿಸಲು ನಿರ್ವಹನೆಗಾಗಿ ತಾಲೂಕಾವಾರು ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ತಾಲೂಕಾ ಮಟ್ಟದಲ್ಲಿ ಸಂಬಂಧಿಸಿದ ತಹಶೀಲ್ದಾರರು ಹಾಗೂ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವಂತೆ ಸೂಚಿಸಿದ ಅವರು, ತಾಲೂಕಾ ಹಂತದಲ್ಲಿ ಸಭೆ ಕರೆದು, ಮೆರವಣಿಗೆ, ರಚನೆ ಮತ್ತು ಸಂಯೋಜನೆ ಮಾರ್ಗ, ತುಂಗುವಿಕೆ, ವಸತಿ, ವಿಶ್ರಾಂತಿ, ಸುರಕ್ಷತೆ ಸೇರಿದಂತೆ ಪ್ರತಿದಿನ ೬ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ತಬ್ಧಚಿತ್ರಗಳು ಸಂಚರಿಸುವAತೆ ನೋಡಿಕೊಳ್ಳಲು ಸೂಕ್ತ ರೂಪರೇಷೆ (ರೂಟ್‌ಮ್ಯಾಪ್) ಸಿದ್ಧಪಡಿಸಿಟ್ಟುಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ಜಾಗೃತಿ ಜಾಥಾ ಸ್ತಬ್ಧಚಿತ್ರ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ತಂಗುವ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಾಹಿತಿ, ಉಪನ್ಯಾಸಕರು ಸೇರಿದಂತೆ ನುರಿತರನ್ನು ಆಹ್ವಾನಿಸಿ ಅವರಿಂದ ಸಂವಿಧಾನ ಕುರಿತು ಉಪನ್ಯಾಸ ಕಾರ್ಯಕ್ರಮಗಳ ಆಯೋಜನೆ, ಸ್ಥಳೀಯ ಕಲಾವಿದರಿಂದ ವಿವಿಧ ಕಲೆಗಳ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಆಯಾ ಮತಕ್ಷೆತ್ರದಲ್ಲಿ ಸಂಚರಿಸುವ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು ಎಂದು ಅವರು ಹೇಳಿದರು.
ಜಿಲ್ಲೆಯಾದ್ಯಂತ ಸಂಚರಿಸಲಿರುವ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರದ ಯಶಸ್ವಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು, ವಿವಿಧ ತಾಲೂಕಾ ತಹಶೀಲ್ದಾರ, ಕಾರ್ಯನಿರ್ವಾಹಕ ಅಧಿಕಾರಿಗಳು, ಪುರಸಭೆ, ಪಟ್ಟಣ ಪಂಚಾಯತಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಈರಣ್ಣ ಆಶಾಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ವಿಜಯಪುರ ತಹಶೀಲ್ದಾರ ಶ್ರೀಮತಿ ಕವಿತಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.