Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಧ್ಯಾತ್ಮಿಕತೆಯಿಂದ ಅರಿವಿನ ದೀಪ ಬೆಳಗಿಸಿದ ಸಿದ್ದೇಶ್ವರ ಶ್ರೀ
(ರಾಜ್ಯ ) ಜಿಲ್ಲೆ

ಆಧ್ಯಾತ್ಮಿಕತೆಯಿಂದ ಅರಿವಿನ ದೀಪ ಬೆಳಗಿಸಿದ ಸಿದ್ದೇಶ್ವರ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಸ್ವಾಮಿ ವಿವೇಕಾನಂದರು ಹಾಗೂ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರು ವ್ಯಕ್ತಿ ತನ್ನನ್ನು ತಾನಾರು ಎನ್ನುವುದನ್ನು ಕಂಡುಕೊಂಡಾಗ ಮಾತ್ರ ಅರಿವಿನ ಬೆಳಕಿನೆಡೆಗೆ ಮನುಷ್ಯ ಸಾಗುವುದಕ್ಕೆ ಸಾಧ್ಯವಾಗುತ್ತದೆ ಎಂದು ರಾಮಕೃಷ್ಣ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ನಗರದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ಸ್ನಲ್ಲಿ ಆಯೋಜಿಸಲಾಗಿದ್ದ ಸ್ವಾಮಿ ವಿವೆಕಾನಂದರ ೧೬೧ ಜನ್ಮದಿನೋತ್ಸವ ಹಾಗೂ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಡೀ ಜಗತ್ತಿಗೆ ನಿಜವಾದ ಭಾರತವನ್ನು ಪರಿಚಯಿಸುವ ಮೂಲಕ ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರ ಹಾಗೂ ಪರಂಪರೆಯ ಪರಿಚಯ ಮಾಡಿಕೊಟ್ಟ ಸ್ವಾಮಿ ವಿವೇಕಾನಂದರು ಹಾಗೂ ಆಧ್ಯಾತ್ಮಿಕ ಶಕ್ತಿಯ ಮೂಲಕ ಜನಸಾಮಾನ್ಯರಲ್ಲಿ ಅರಿವಿನ ದೀಪ ಪ್ರಜ್ವಲಿಸಿದವರು ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಎಂದು ಹೇಳಿದರು.
ವಿಜ್ಞಾನ ತಂತ್ರಜ್ಞಾನದಲ್ಲಿ ಮುಂದುವರಿದಿರುವ ಭಾರತ ಸ್ವಾಮಿ ವಿವೇಕಾನಂದರನ್ನು ಅರಿಯುವಲ್ಲಿ ಎಡವಿದೆ. ಪಾಶ್ಚಾತ್ಯರು ಅವರ ಮಾತುಗಳನ್ನು ಕೇಳಿ ತಮ್ಮ ಬದುಕಿನಲ್ಲಿ ಪರಿವರ್ತನೆ ತಂದುಕೊಂಡರು. ಇಂದಿಗೂ ಅಮೇರಿಕಾದ ೨೮ ಪ್ರತಿಶತ ಜನಗಳು ಭಾರತೀಯ ಸಂಸ್ಕೃತಿಯಂತೆ ಬದುಕು ಕಟ್ಟಿಕೊಳ್ಳುತ್ತಿರುವುದಕ್ಕೆ ಕಾರಣವಾಗಿದ್ದು ಸ್ವಾಮಿ ವಿವೇಕಾನಂದರ ವಿಚಾರದ ಹರಿವು ಅವರ ದೇಶದಲ್ಲಿ ಪ್ರವಾಹದಂತೆ ಬೋರ್ಗರೆದಿದ್ದು. ಆದರೆ ನಮ್ಮ ಭಾರತೀಯರಿಗೆ ಇದರ ಅರಿವಾಗುತ್ತಿಲ್ಲವೆಂದು ವಿಷಾದಿಸಿದ ಅವರು, ಸ್ವಾಮಿ ವಿವೇಕಾನಂದ, ಸಿದ್ಧೇಶ್ವರ ಸ್ವಾಮೀಜಿಯವರ ವಿಚಾರಗಳನ್ನು ಅರಿಯಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿದ್ಧೇಶ್ವರ ಸಂಸ್ಥೆಯ ಉಪಾಧ್ಯಕ್ಷ ಸಂಗು ಸಜ್ಜನ, ನಿರ್ಭಯಾನಂದ ಸರಸ್ವತಿಯವರ ರೂಪದಲ್ಲಿ ಸ್ವಾಮಿ ವಿವೇಕಾನಂದರು ಚಿರ ಶಾಶ್ವತವಾಗಿರುವಂತೆ ಪೂಜ್ಯ ಸಿದ್ಧೇಶ್ವರ ಸ್ವಾಮೀಜಿಯವರು ತಮ್ಮ ಚಿಂತನೆಗಳ ಮೂಲಕ ಇಂದು ಪ್ರತಿಯೊಬ್ಬರ ಎದೆಯಲ್ಲಿ ಶಾಶ್ವತವಾಗಿ ಉಳಿದಿದ್ದಾರೆ ಎಂದರು.
ವಿಜಯಪುರ ರಾಮಕೃಷ್ಣ ಆಶ್ರಮದ ಸ್ವಾಮೀ ನರೇಶಾನಂದ, ಜೆಎಸ್‌ಎಸ್ ಆಸ್ಪತ್ರೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಶರಣ ಮಳಖೇಡ್ಕರ್ ಸೇರಿದಂತೆ ಆಸ್ಪತ್ರೆ ಸರ್ವ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.