ವಿಜಯಪುರ: ಕೃಷಿ ವಿಶ್ವವಿದ್ಯಾಲಯ, ಧಾರವಾಡ ವಿಜಯಪುರ ಆವರಣ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಜನವರಿ ೨೧ ರಿಂದ ೨೩ರವರೆಗೆ ವಿಜಯಪುರ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ‘ಸುಸ್ಥಿರ ಕೃಷಿಗಾಗಿ ಬರ ನಿರ್ವಹಣೆ’ ಕೃಷಿ ಮೇಳ-೨೦೨೩-೨೪ ಹಮ್ಮಿಕೊಳ್ಳಲಾಗಿದೆ.
ಜನವರಿ ೨೧ ರಂದು ಬೆಳಿಗ್ಗೆ ೧೧ ಗಂಟೆಗೆ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಕೃಷಿ ಮೇಳವನ್ನು ಉದ್ಘಾಟಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಕೃಷಿ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಕೃಷಿ ಪ್ರಕಟಣೆಗಳನ್ನು ಬಿಡುಗಡೆಗೊಳಿಸಲಿದ್ದಾರೆ.
ನಾಗಠಾಣ ಶಾಸಕರಾದ ವಿಠ್ಠಲ ಕಟದೊಂಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದರಾದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಬಸನಗೌಡ ಆರ್.ಪಾಟೀಲ ಯತ್ನಾಳ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ, ಆಶೋಕ ಮನಗೂಳಿ ಹಿಟ್ಟಿನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿಕುಮಾರ ಸಾಬು ಕಡಿಮನಿ ಅವರು ಭಾಗವಹಿಸಲಿದ್ದಾರೆ. ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಪಿ.ಎಲ್.ಪಾಟೀಲ ಅವರು ಗೌರವ ಉಪಸ್ಥಿತರಿರಲಿದ್ದಾರೆ.
ಸಮಾರೋಪ ಸಮಾರಂಭ : ಜ.೨೩ರಂದು ಮಧ್ಯಾಹ್ನ ೩ ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದ್ದು, ನಾಗಠಾಣ ಶಾಸಕರಾದ ವಿಠ್ಠಲ ಕಟದೊಂಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮಗಳ ವಿವರ: ಜನವರಿ ೨೧ ರಂದು ಮಧ್ಯಾಹ್ನ ೨ ಗಂಟೆಯಿಂದ ಹವಾಮಾನ ವೈಪರಿತ್ಯದ ಪರಿಣಾಮಗಳು ಮತ್ತು ನಿರ್ವಹಣೆ, ಬರ ನಿರ್ವಹಣೆಗಗಿ ಕೃಷಿ ತಂತ್ರಜ್ಞಾನಗಳು, ರೈತರಿಂದ ರೈತರಿಗೆ ಕಾರ್ಯಕ್ರಮ-ಪ್ರಶಸ್ತಿ ವಿಜೇತ ರೈತರಿಂದ ಅನುಭವ ಹಂಚಿಕೆ, ಕಾರ್ಯಕ್ರಮಗಳು ನಡೆಯಲಿವೆ.
ಜನವರಿ ೨೨ ರಂದು ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧ ಗಂಟೆವರೆಗೆ ಸಾವಯವ ಮತ್ತು ನೈಸರ್ಗಿಕ ಕೃಷಿ, ರೈತರಿಂದ ರೈತರಿಗೆ ಕಾರ್ಯಕ್ರಮ–ಪ್ರಶಸ್ತಿ ವಿಜೇತ ರೈತರಿಂದ ಅನುಭವ ಹಂಚಿಕೆ, ಕಾರ್ಯಕ್ರಮಗಳು ಹಾಗೂ ಜನವರಿ ೨೩ ರಂದು ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧ ಗಂಟೆವರೆಗೆ ಸುಸ್ಥಿರ ಕೃಷಿಗಾಗಿ ಉಪ ಕಸುಬುಗಳು, -ಪ್ರಶಸ್ತಿ ವಿಜೇತ ರೈತರಿಂದ ಅನುಭವ ಹಂಚಿಕೆ, ಕಾರ್ಯಕ್ರಮಗಳು ನಡೆಯಲಿವೆ.
Subscribe to Updates
Get the latest creative news from FooBar about art, design and business.
Related Posts
Add A Comment
