ವಿಜಯಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜನವರಿ ೨೬ ರಂದು ಜರುಗುವ ಗಣರಾಜ್ಯೋತ್ಸವ ಅಂಗವಾಗಿ ೨೦೨೩-೨೪ನೇ ಸಾಲಿನಲ್ಲಿ ರಾಜ್ಯ-ರಾಷ್ಟ್ರ- ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಸನ್ಮಾನಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹರು ದಿನಾಂಕ : ೨೩-೦೧-೨೦೨೪ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ವಿಜಯಪುರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ: ೦೮೩೫೨-೨೫೧೦೮೫, ಮೊ: ೭೦೧೯೧೬೭೨೪೩ ಸಂಖ್ಯೆಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
