ಬಸವನಬಾಗೇವಾಡಿ: ಧಾರ್ಮಿಕ ಕಾರ್ಯಕ್ರಮಗಳು ಮನಸ್ಸಿಗೆ ನೆಮ್ಮದಿ ನೀಡುವುದರೊಂದಿಗೆ ಸುಂದರ ಬದುಕು ಕಟ್ಟಿಕೊಳ್ಳಲು ಅಗತ್ಯವಿರುವ ಮೌಲ್ಯಗಳನ್ನು ತಿಳಿಸಿಕೊಡುತ್ತವೆ. ಪುರಾಣ, ಪ್ರವಚನದಂತಹ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದು ಬಬಲೇಶ್ವರದ ಜಗದ್ಗುರು ಡಾ.ಮಹದೇವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಾಲೂಕಿನ ಮನಗೂಳಿ ಸಂಸ್ಥಾನ ಹಿರೇಮಠದಲ್ಲಿ ಬುಧವಾರ ಸಂಜೆ ಡಾ. ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ 11ನೇ ಪುಣ್ಯರಾಧನೆ ಹಾಗೂ ವಿವಿಧ ಕಾರ್ಯಕ್ರಮಯಂಗವಾಗಿ ಜ.17 ರಿಂದ ಫೆ.2 ರವರೆಗೆ ಹಮ್ಮಿಕೊಂಡಿರುವ ಕಲಬುರಗಿ ಶರಣಬಸವೇಶ್ವರ ಪುರಾಣ ಪ್ರಾರಂಭೋತ್ಸವ ಸಮಾರಂಭದ ಸಾನಿಧ್ಯ ವಹಿಸಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಶ್ರೀಮಠದ ಅಭಿನವ ಸಂಗನಬಸವ ಶಿವಾಚಾರ್ಯರು ಐವತ್ತು ವರ್ಷದಲ್ಲಿ ಮಾಡುವಂತಹ ಕೆಲಸವನ್ನು ಹತ್ತೇ ವರ್ಷದಲ್ಲಿ ಮಾಡಿದ್ದಾರೆ. ಭಕ್ತರ ಸಹಕಾರದೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಈ ಜಿಲ್ಲೆಯ ಕ್ರಿಯಾಶೀಲ ಪೂಜ್ಯರು ಎನಿಸಿಕೊಂಡಿದ್ದಾರೆ ಎಂದು ಹೇಳಿದರು.
ಯರನಾಳ ವಿರಕ್ತಮಠದ ಗುರು ಸಂಗನಬಸವ ಸ್ವಾಮೀಜಿ ಮಾತನಾಡಿದರು.
ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮನಗೂಳಿ ಹಿರೇಮಠದ ಹಿಂದಿನ ಪೂಜ್ಯರು ಈ ಮಠದ ಅಭಿವೃದ್ಧಿಗೆ ಶ್ರಮಿಸುವುದರೊಂದಿಗೆ ಭಕ್ತರಿಗೆ ನಿರಂತರವಾಗಿ ಮಾರ್ಗದರ್ಶನ ಮಾಡಿದ್ದಾರೆ ಎಂದು ಹೇಳಿದರು.
ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಮಾಳಿಂಗರಾಯ ಮಹಾರಾಜರು, ಉಪದೇಶಾಮೃತ ಸ್ವಾಮೀಜಿ, ಅಧ್ಯಕ್ಷತೆ ವಹಿಸಿದ್ದ ಜೆಡಿಎಸ್ ಮುಖಂಡ ಅಪ್ಪುಗೌಡ ಪಾಟೀಲ ಮಾತನಾಡಿದರು.
ವ್ಜಿಡಿಸಿಸಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ, ವಕೀಲ ಬಿ.ಕೆ.ಕಲ್ಲೂರ, ವಿಶ್ವನಾಥ ಪಾಟೀಲ, ಈರಪ್ಪ ಹುಣಸಿಕಟ್ಟಿ ಇದ್ದರು.ಎಸ್.ಐ.ಗೆಣ್ಣೂರ ನಿರೂಪಿಸಿದರು. ಮಾಂತೇಶ ಮನಗೂಳಿ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

