ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನ ಟಕ್ಕಳಕಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಜಾಧವನಗರ ಟಕ್ಕಳಕಿ ಶಾಲೆಯ, ವಿಜ್ಞಾನ ಮತ್ತು ಗಣಿತ ವಿಷಯದ ಶಿಕ್ಷಕಿ ಶ್ರೀಮತಿ ಶಿಲ್ಪಾ. ಹಂಜಿ (ಬಿರಾದಾರ) ಅವರು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯವರು ಶೈಕ್ಷಣಿಕ ಸಾಧನೆಗಾಗಿ ಕೊಡಮಾಡುವ ‘ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ‘ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಜಿ.ಎಸ್.ಕಾಂಬಳೆ ಹಾಗೂ ಕಾರ್ಯದರ್ಶಿ ರಮೇಶ ನಾಯಕ ತಿಳಿಸಿದ್ದಾರೆ.
ವಿಜಯಪುರದ ತೊರವಿಯಲ್ಲಿರುವ ಡಾ.ಅಂಬೇಡ್ಕರ್ ಸಮುದಾಯ ಭವನದಲ್ಲಿ ಜನೇವರಿ ೨೧ ರಂದು ನಡೆಯಲಿರುವ ಜಿಲ್ಲಾಮಟ್ಟದ ಶೈಕ್ಷಣಿಕ ಸಮ್ಮೇಳನ ಹಾಗೂ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶ್ರೀಮತಿ ಶಿಲ್ಪಾ. ಹಂಜಿ (ಬಿರಾದಾರ) ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಕ್ಕಳಕಿಯ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮಧುಕರ.ಜಾಧವ, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಜಾಲೀಂದ್ರ ಘಾಟಗೆ, ಶಾಲಾಮುಖ್ಯ ಗುರು ಬಿ.ಎಸ್.ಹಾಲಳ್ಳಿ, ಸಿಬ್ಬಂದಿಯವರಾದ ಡಿ.ಎನ್.ಫೋಣಸಗಿ, ಎಸ್.ಆರ್.ಅನಂತಪೂರ, ಎಸ್.ಜಿ.ಬಗಲಿ, ವಿ.ಎಮ್.ಮುಳಗುಂದ ಹಾಗೂ ಶಾಲಾಮಕ್ಕಳು ಹರ್ಷ ವ್ಯಕ್ತಪಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

