ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಜಿಲ್ಲೆಯ ೨೨ ಪರೀಕ್ಷಾ ಕೇಂದ್ರಗಳಲ್ಲಿ ಜನವರಿ ೨೦ ಹಾಗೂ ೨೧ ರಂದು ನಡೆಯಲಿದ್ದು, ಸದರಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳಿಗೆ ಜನವರಿ ೨೦ ಹಾಗೂ ೨೧ ರಂದು ಕನ್ನಡಭಾಷಾ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಪಾರದರ್ಶಕವಾಗಿ ನಡೆಯುವಂತೆ ಮುನ್ನೆಚ್ಚರಿಕೆಯಾಗಿ ಕಲಂ ೧೪೪ರನ್ವಯ ಅಂದು ಬೆಳಿಗ್ಗೆ ೯ ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.
ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್‌ನನ್ನು ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಸದರಿ ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ ಕೆಫೆಗಳು, ಕೋಚಿಂಗ್ ಕೇಂದ್ರಗಳು ಸದರಿ ಅವಧಿಯಲ್ಲಿ ತೆರೆಯದಂತೆ ಆದೇಶಿಸಲಾಗಿದೆ.
Subscribe to Updates
Get the latest creative news from FooBar about art, design and business.
ಜ.೨೧-೨೨ ರಂದು ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಗೆ ಪರೀಕ್ಷೆ :ನಿಷೇಧಾಜ್ಞೆ
Related Posts
Add A Comment
