ವಿಜಯಪುರ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸಟೇಬಲ್ (ಸಿಎಆರ್ ಮತ್ತು ಡಿಎಆರ್) ೩೦೬೪ ಹುದ್ದೆಗಳಿಗೆ ಜ.೨೮ರಂದು ಬೆಳಿಗ್ಗೆ ೧೧ ರಿಂದ ೧೨-೩೦ರವರೆಗೆ ರಾಜ್ಯದಾದ್ಯಂತ ಲಿಖಿತ ಪರೀಕ್ಷೆ ಆಯೋಜಿಸಲಾಗಿದೆ.
ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಮುಂಬರುವ ದಿನಗಳಲ್ಲಿ ಕರೆ ಪತ್ರದ ಬಗ್ಗೆ ಎಸ್.ಎಂ.ಎಸ್. ಮೂಲಕ ಮಾಹಿತಿ ನೀಡಲಾಗುವುದು. ಕರೆ ಪತ್ರದ ಲಿಂಕ್‌ನ್ನು ಸಹ ಕಳಿಸಲಾಗುವುದು. ಜಿಲ್ಲೆಯ ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಋಷಿಕೇಶ ಸೋನಾವಣೆ ಅವರು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಸಶಸ್ತ್ರ ಪೊಲೀಸ್ ಕಾನ್ಸಟೇಬಲ್ ಹುದ್ದೆಗೆ ಜ.೨೮ರಂದು ಲಿಖಿತ ಪರೀಕ್ಷೆ
Related Posts
Add A Comment
